fbpx
ಸಮಾಚಾರ

ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್: ವಿಡಿಯೋ ವೈರಲ್

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಆಶೀರ್ವಾದ ಪಡೆಯುತ್ತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಕೆಲದಿನಗಳ ಹಿಂದೆ ಮೈಸೂರು ಮೇಯರ್ ಚುನಾವಣೆಯ ವಿಷಯವಾಗಿ ಸಿದ್ದು ಮತ್ತು ಡಿಕೆಶಿ ನಡುವೆ ಭಿನ್ನಾಭಿಪ್ರಾಯವಿತ್ತು. ಇದಾದ ಬಳಿಕ ಇದೀಗ ಡಿಕೆಶಿ, ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿರುವುದು ಸಿದ್ದು ಅಭಿಮಾನಿಗಳಿಗೆ ಸಂತಸ ಕೊಟ್ಟಿದೆ.

 

 

ನಿನ್ನೆ ಜನಧ್ವನಿ ಜಾಥಾಗೂ ಮುನ್ನ ಡಿ.ಕೆ.ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾದಕ್ಕೆರಗಿ ಆಶೀರ್ವಾದ ಪಡೆದಿದ್ದು, ನಮ್ಮಿಬ್ಬರ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂಬ ಸಂದೇಶ ರವಾನಿಸುವ ಕೆಲಸ ಮಾಡಿದ್ದಾರೆ.

ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಬೆನ್ನು ತಟ್ಟಿ ಆಶೀರ್ವಾದ ಮಾಡಿರುವ ಸಿದ್ದರಾಮಯ್ಯ ಸಹ ಕಾರ್ಯಕರ್ತರಲ್ಲಿ ಹಾಗೂ ಬೆಂಬಲಿಗರಲ್ಲಿ ಮೂಡಿದ್ದ ಅನುಮಾನದ ಗೆರೆಯನ್ನು ಅಳಿಸಿ ಹಾಕುವ ಪ್ರಯತ್ನ ಮಾಡಿದ್ದಾರೆ. ಅಷ್ಟೇ ಅಲ್ಲದೆ ಡಿ.ಕೆ.ಶಿವಕುಮಾರ್​ ಅವರು ಮಲ್ಲಿಕಾರ್ಜುನ ಖರ್ಗೆ, ರಹೆಮಾನ್ ಖಾನ್ ಅವರ ಕಾಲಿಗೂ ನಮಸ್ಕರಿಸಿದ್ದು, ಕಾಂಗ್ರೆಸ್​ನಲ್ಲಿ ಹಿರಿಯರಿಗೆ ಪ್ರಾಶಸ್ತ್ಯ ಇದೆ ಎಂಬ ವಿಚಾರವನ್ನೂ ಪರೋಕ್ಷವಾಗಿ ಎತ್ತಿಹಿಡಿದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top