fbpx
ಸಮಾಚಾರ

6,6,6,6,6,6: ಶ್ರೀಲಂಕಾ ವಿರುದ್ಧ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಸಿಡಿಸಿದ ಪೊಲಾರ್ಡ್‌: ವಿಡಿಯೋ ವೈರಲ್

ವೆಸ್ಟ್‌ಇಂಡೀಸ್‌ನ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ಕೀರನ್ ಪೊಲಾರ್ಡ್, ಓವರ್‌ವೊಂದರ ಎಲ್ಲ ಆರು ಎಸೆತಗಳಲ್ಲಿ ಸಿಕ್ಸರ್ ಬಾರಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇದರೊಂದಿಗೆ ಟ್ವೆಂಟಿ-20 ಅಂತರ ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್ ಸಾಧನೆಯನ್ನು ಸರಿಗಟ್ಟಿದ್ದಾರೆ.

 

 

ಬುಧವಾರ (ಮಾರ್ಚ್ 3) ಆ್ಯಂಟಿಗುವಾದ ಕೂಲಿಡ್ಜ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದ ವೆಸ್ಟ್‌ ಇಂಡೀಸ್-ಶ್ರೀಲಂಕಾ ಮೊದಲನೇ ಟಿ20ಐ ಪಂದ್ಯದಲ್ಲಿ ವಿಂಡೀಸ್ ನಾಯಕ ಪೊಲಾರ್ಡ್ ಸಿಕ್ಸ್ ಸಿಕ್ಸರ್ ದಾಖಲೆ ನಿರ್ಮಿಸಿದ್ದಾರೆ. ಪಂದ್ಯದ 6ನೇ ನಲ್ಲಿ ಸಿಕ್ಸ್ ಸಿಕ್ಸರ್ ಚಚ್ಚಿರುವ ಕೀರನ್ ಪೊಲಾರ್ಡ್, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದು ಓವರ್‌ನಲ್ಲಿ 36 ರನ್ ಬಾರಿಸಿದ ವಿಶ್ವದ 3ನೇ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಟಿ20ಐ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ಚದ ಎರಡನೇ ಬ್ಯಾಟ್ಸ್‌ಮನ್‌ ಎಂಬ ಮೈಲಿಗಲ್ಲು ಕೂಡ ಸ್ಥಾಪಿಸಿದ್ದಾರೆ.

 

 

ಕೈರಾನ್‌ ಪೊಲಾರ್ಡ್‌ಗೂ ಮೊದಲು ಭಾರತ ತಂಡದ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಒಂದೇ ಓವರ್‌ನಲ್ಲಿ ಆರು ಸಿಕ್ಸರ್ ಸಾಧನೆ ಮಾಡಿದ ಏಕೈಕ ಬ್ಯಾಟ್ಸ್‌ಮನ್‌ ಆಗಿದ್ದರು. 2007ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್‌ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್‌ಗೆ ಯುವಿ ಆರು ಭರ್ಜರಿ ಸಿಕ್ಸರ್‌ ಸಿಡಿಸಿದ್ದರು.

ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಓವರ್‌ಗೆ ಆರು ಸಿಕ್ಸರ್‌ ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್‌ ಎಂಬ ಸಾಧನೆಗೆ ಕೈರಾನ್‌ ಪೊಲಾರ್ಡ್ ಭಾಜನರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಹರ್ಷಲ್‌ ಗಿಬ್ಸ್‌ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್‌ ಆಗಿದ್ದಾರೆ. 2007ರ ಓಡಿಐ ವಿಶ್ವಕಪ್‌ ಟೂರ್ನಿಯಲ್ಲಿ ನೇದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಗಿಬ್ಸ್ ಈ ಮೈಲುಗಲ್ಲು ಸ್ಥಾಪಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top