fbpx
ಸಮಾಚಾರ

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರ

ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಪುಟ್ಟಮ್ಮ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.. ಈ ಕುರಿತು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಗೂಳಿಹಟ್ಟಿ ಗ್ರಾಮದಲ್ಲಿ ವಾಸವಾಗಿರುವ ಶಾಸಕರ ತಾಯಿ ಪುಟ್ಟಮ್ಮ ಹೊಸದುರ್ಗ ಪಟ್ಟಣದ ಹಿರಿಯೂರು ರಸ್ತೆಯಲ್ಲಿರುವ ಚರ್ಚೆಗೆ ಪ್ರತಿದಿನ ಪ್ರಾರ್ಥನೆಗೆ ತೆರಳುವ ಮೂಲಕ ಕ್ರಿಶ್ಚಿಯನ್ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿದ್ದಾರೆ.

ಪುಟ್ಟಮ್ಮ ಅವರಿಗೆ ಮೂವರು ಗಂಡು ಮಕ್ಕಳು. ತೆರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೊದಲನೇ ಮಗ ತಿಪ್ಪೇಸ್ವಾಮಿ ಏಳು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಂತರ ಪುಟ್ಟಮ್ಮ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.

ಗೂಳಿಹಟ್ಟಿ ಗ್ರಾಮದಲ್ಲಿ ಪುಟ್ಟಮ್ಮ ಅವರು ಇರುವ ಮನೆ 2018ರ ಮಳೆಗಾಲದಲ್ಲಿ ಬಿದ್ದು ಹೋಗಿತ್ತು. ಶಾಸಕರು ತಾಯಿಗಾಗಿ ಹೊಸ ಮನೆಯನ್ನು ಕಟ್ಟಿಸಿಕೊಟ್ಟಿದ್ದರು. ಮನೆ ಗೃಹ ಪ್ರವೇಶದ ಸಂದರ್ಭದಲ್ಲಿ ಹಿಂದೂ ದೇವರುಗಳ ಫೋಟೋಗಳಿಗೆ ಪೂಜೆ ಸಲ್ಲಿಸಲಾಗಿತ್ತು.ಆದ್ದರಿಂದ, ಪುಟ್ಟಮ್ಮ ಆ ಮನೆಯಲ್ಲಿ ವಾಸ ಮಾಡುತ್ತಿಲ್ಲ. ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿದ್ದಾರೆ. ಎಂದು ಹೇಳಲಾಗುತ್ತಿದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top