fbpx
ಸಮಾಚಾರ

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೊಸ ಬಾಂಬ್ ಸಿಡಿಸಿದ ಹೆಚ್ ಡಿ ಕುಮಾರಸ್ವಾಮಿ

ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಈ ಕೇಸ್ ನಲ್ಲಿ 5 ಕೊಟಿ ರೂಪಾಯಿಯ ಡೀಲ್ ನಡೆದಿದೆ. ಕಳೆದ ಮೂರು ತಿಂಗಳಿನಿಂದ ಡೀಲ್ ನಡೆದಿದ್ದು, ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.

ಮೈಸೂರಿನಲ್ಲಿಂದು ಮಾತನಾಡಿದ ಕುಮಾರಸ್ವಾಮಿ ಕಳೆದು ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ ಇದ್ದಾರೆ. ಇದನ್ನ ತನಿಖೆ ಮಾಡಿಸುವ ಜವಬ್ದಾರಿ ಸರ್ಕಾರದ್ದು. ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ. ಸರ್ಕಾರ ಬೀಳಿಸಿದರು ಎನ್ನುವ ಕಾರಣಕ್ಕೆ ನಾನು ಒಂದು ಕಲ್ಲು ಹೊಡೆಯಬೇಕು ಅಂತ ಹೊಡೆಯೋದಿಲ್ಲ ಎಂದರು.

ಇದೀಗ ಸಿಡಿ ಪ್ರಕರಣ ಸಂಬಂಧ ಹಲವು ರೀತಿಯ ವ್ಯಾಖ್ಯಾನ ಶುರುವಾಗಿದೆ. ಪ್ರಕರಣ ಹಳ್ಳ ಹಿಡಿಯುವಂತದ್ದಲ್ಲ. ಆ ಮಂತ್ರಿನಾ ರಾಜೀನಾಮೆ ಕೊಡಿಸಬೇಕೆಂಬ ಉದ್ದೇಶ ಇತ್ತು. ಇದೀಗಾ ಆ ರಾಜೀನಾಮೆ ಕೊಡಿಸುವಲ್ಲಿ ಅವರು ಸಫಲರಾಗಿದ್ದಾರೆ. ಇದೀಗ ಆ ಹೆಣ್ಣು ಮಗಳನ್ನ ಕಟ್ಟಿಕೊಂಡು ಅವರಿಗೆ ಏನು? ಅವರಿಬ್ಬರೇ ವಿಡಿಯೋ ಮಾಡಿಕೊಂಡಿದ್ದಾರೆ. ಆದರೆ ಆ ವಿಡಿಯೋ ಹೊರಗೆ ಕೊಟ್ಟವರು ಯಾರೆನ್ನುವುದು ಮಾತ್ರ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top