fbpx
ಸಮಾಚಾರ

ಬೆಳ್ಳಂಬೆಳಗ್ಗೆ ಬಿಗ್‍ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸ್ ದಾಳಿ

ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರಗೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಡ್ರಗ್ ಜಾಲದಲ್ಲಿ ಮಸ್ತಾಲ್ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಗೋವಿಂದಪುರ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಬಾಣಸವಾಡಿ ಎಸಿಪಿ ನೇತೃತ್ವದಲ್ಲಿ ಪೊಲೀಸರು ಮನೆ ಮೇಲೆ ದಾಳಿ ನಡಿಸಿ ಶೋಧ ನಡೆಸಿದ್ದಾರೆ.

ಪೊಲೀಸ್ರು ನಿನ್ನೆ ನೈಜೀರಿಯನ್ ಡ್ರಗ್ ಪೆಡ್ಲರ್ ಒಬ್ಬನನ್ನ ಬಂಧಿಸಿದ್ದರು. ಆತ ವಿಚಾರಣೆ ವೇಳೆ ಮಸ್ತಾನ್ ಹೆಸ್ರು ಬಾಯ್ಬಿಟ್ಟಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಸರ್ಚ್ ವಾರೆಂಟ್​ ಪಡೆದು ಇಂದು ಬೆಳ್ಳಂಬೆಳಗ್ಗೆ 6 ಗಂಟೆಗೆ ಬಾಣಸವಾಡಿ ಎಸಿಪಿ ಸಕ್ರಿ ನೇತೃತ್ವದಲ್ಲಿ ಮಸ್ತಾನ್ ಮನೆ ಮೇಲೆ ರೇಡ್​ ಮಾಡಲಾಗಿತ್ತು. ಜೊತೆಗೆ ಕೇಶವ್ ಕೌಲ್ ಎಂಬಾತನ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ.

ಈತ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದು, ಕೆಲ ಕನ್ನಡ ಸಿನೆಮಾಗಳಲ್ಲಿ ಕೂಡ ನಟಿಸಿದ್ದ ಎಂದು ತಿಳಿದುಬಂದಿದೆ. ಈ ಮೂಲಕ ಅಕ್ರಮವಾಗಿ ಮಾದಕ ವಸ್ತುಗಳ ಸಂಗ್ರಹ, ಮಾರಾಟ, ಕಳ್ಳಸಾಗಣೆ, ಸೇವನೆ ವಿರುದ್ಧ ನಗರ ಅಪರಾಧ ವಿಭಾಗ ಪೊಲೀಸರ ಬೇಟೆ ಮುಂದುವರಿದಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆಯನ್ನು ನಡೆಸಲಾಗುತ್ತಿದೆ ಎಂದು ನಗರ ಅಪರಾಧ ವಿಭಾಗ ಪೊಲೀಸರು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top