fbpx
ಸಮಾಚಾರ

ಕರ್ನಾಟಕ ಸಹಕಾರ ಗ್ರಾಹಕರ ಮಹಾಮಂಡಳಿಯಲ್ಲಿ ವಿವಿಧ ಹುದ್ದೆಗಳ ನೇಮಕ: ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಟ್ಟು 43 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 5/4/2021 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ
ಹುದ್ದೆಗಳಿಗೆ ಅನುಗುಣವಾಗಿ ಬಿಕಾಂ / ಪದವಿ / ಪಿಯುಸಿ / ಎಸ್ಎಸ್‌ಎಲ್‌ಸಿ / ಡಿಪ್ಲೊಮ ಇನ್ ಫಾರ್ಮಸಿ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

ವಯೋಮಿತಿ ಅರ್ಹತೆಗಳು
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ವರ್ಗ – 35 ವರ್ಷ, ಇತರೆ ಹಿಂದುಳಿದ ವರ್ಗ – 38 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟು ?
ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳಿಗೆ ರೂ.1000.
ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.

ವಿಶೇಷ ಸೂಚನೆ:
ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಅಂತಹ ಅಭ್ಯರ್ಥಿಗಳು ಒಂದೇ ನೋಂದಣಿ ಸಂಖ್ಯೆಯಡಿಯಲ್ಲಿಯೇ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ, ಪ್ರತ್ಯೇಕವಾಗಿ ಅರ್ಜಿ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಕೆ ಹೇಗೆ?
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಫೀಶಿಯಲ್ ವೆಬ್‌ಸೈಟ್‌ www.recruitapp.in/ksccf2021 ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top