fbpx
ಸಮಾಚಾರ

ಜಮೀನಿನ ವಿಚಾರವಾಗಿ ನಟ ಯಶ್ ತಂದೆ-ತಾಯಿ ಮತ್ತು ಗ್ರಾಮಸ್ಥರ ನಡುವೆ ಜೋರು ಗಲಾಟೆ: ವಿಡಿಯೋ ವೈರಲ್

ಹಾಸನ ಜಿಲ್ಲೆಯ ತಿಮ್ಮೇನಹಳ್ಳಿಯಲ್ಲಿ ಜಮೀನಿನ ವಿಚಾರವಾಗಿ ರಾಕಿಂಗ್ ಸ್ಟಾರ್ ಯಶ್ ಅವರ ತಂದೆ- ತಾಯಿ ಮತ್ತು ಊರಿನ ಜನರ ಮದ್ಯೆ ತೀವ್ರ ಗಲಾಟೆಯಾಗಿದೆ. ಜಮೀನಿಗೆ ರಸ್ತೆ ನಿರ್ಮಿಸೋ ವಿಚಾರಕ್ಕೆ ಈ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ.

 

 

ನಟ ಯಶ್ ತಂದೆ ಅರುಣ್ ಕುಮಾರ್‌ ಹಾಗೂ ತಾಯಿ ಪುಷ್ಪ ಜಮೀನಿನ ಬಳಿ ಕೆಲಸ ಮಾಡೋವಾಗ ಗ್ರಾಮಸ್ಥರ ನಡುವೆ ವಾಗ್ವಾದ ಶುರುವಾಗಿದೆ. ಯಶ್ ಪೋಷಕರು ಜಮೀನಿನ ಬಳಿ ಜೆಸಿಬಿಯಿಂದ ಕೆಲಸ ಮಾಡಿಸುತ್ತಿದ್ದರು ಈ ವೇಳೆ ಕೆಲಸ ಮಾಡಿಸದಂತೆ ಗ್ರಾಮಸ್ಥರು ಅಡ್ಡಿಪಡಿಸಿದ್ದಾರೆ.

ಈ ವೇಳೆ ಮಾತಿಗೆ ಮಾತು ಬೆಳೆದು ಗ್ರಾಮಸ್ಥರು ಮತ್ತು ಕೆಲ ರಾಕಿಂಗ್ ಸ್ಟಾರ್ ಯಶ್ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದಾರೆ. ಬಳಿಕ ಸ್ಥಳಕ್ಕೆ ದುದ್ದ ಪೊಲೀಸರು ಭೇಟಿ ನೀಡಿದ್ದು ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿದಿದೆ. ಯಶ್ ಬೆಂಬಲಿಗರು ಮತ್ತು ಊರಿನ ಜನರ ನಡುವೆ ನಡೆದ ಜಗಳವನ್ನು ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top