fbpx
ಸಮಾಚಾರ

ಕನ್ನಡಿಗರನ್ನು ಬೊ* ಮಕ್ಕಳು ಎಂದು ಬೈದಿದ್ದ ಪ್ರಕರಣ: ರಾಸಲೀಲೆ ಕುಖ್ಯಾತಿಯ ಜಾರಕಿಹೊಳಿ ವಿರುದ್ಧ ದೂರು ದಾಖಲು

ಸಿಡಿ ಪ್ರಕರಣದಲ್ಲಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ರಾಸಲೀಲೆ ಸಿ.ಡಿ. ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ತಲೆ ಎತ್ತಿ ಓಡಾಡದ ಸ್ಥಿತಿ ನಿರ್ಮಾಣವಾಗಿದೆ. ಇದರ ಮಧ್ಯೆ ಕನ್ನಡಿಗರಿಗೆ ಅವಾಚ್ಯ ಪದವನ್ನು ಬಳಸಿದ್ದಾರೆ ಎಂದು ಆರೋಪಿಸಿ ಕನ್ನಡಿಗರ ರಕ್ಷಣಾ ವೇದಿಕೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ್ದಾರೆ.

 

 

ಹೌದು….ಯುವತಿಯೊಂದಿಗಿನ ರಾಸಲೀಲೆ ವೇಳೆ ರಮೇಶ್ ಜಾರಕಿಹೊಳಿ ಅವರು ಕನ್ನಡಿಗರ ಬಗ್ಗೆ ಅವಹೇಳನ ಮಾತುಗಳನ್ನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಿಡಿಯಲ್ಲಿ ಸಂತ್ರಸ್ತ ಯುವತಿಯೊಂದಿಗೆ ಸಂಭಾಷಣೆ ನಡೆಸಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಕನ್ನಡಿಗರ ಬಗ್ಗೆ ಬೊ ಮಕ್ಕಳು ಅಂತೆಲ್ಲಾ ತುಚ್ಛವಾಗಿ ಮಾತನಾಡಿದ್ದಾರೆ. ಈ ಮೂಲಕ ಎಲ್ಲಾ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕನ್ನಡಿಗರ ರಕ್ಷಣಾ ವೇದಿಕೆ ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

 

ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್​ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಅವರು ಈ ಕೂಡಲೇ ಕನ್ನಡಿಗರ ಬೇಷರತ್ ಕ್ಷಮೆ ಕೇಳಬೇಕು. ಒಂದುವೇಳೆ ರಮೇಶ್​ ಜಾರಕಿಹೊಳಿ ಕ್ಷಮೆಯಾಚಿಸಿದಿದ್ದರೆ ಅವರ ನಿವಾಸದ ಬಳಿ ಮಹಿಳಾ ಕಾರ್ಯಕರ್ತೆಯರು ಧರಣಿ ಕೂರುವುದು ನಿಶ್ಚಿತ ಎಂದು ಇದೇ ವೇಳೆಯಲ್ಲಿ ಎಚ್ಚರಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top