fbpx
ಸಮಾಚಾರ

ಜೊಮ್ಯಾಟೋ ಡೆಲಿವರಿ ಬಾಯ್ ಬೆಂಬಲಕ್ಕೆ ನಿಂತ ಸಂಸದ ಜಿಸಿ ಚಂದ್ರಶೇಖರ್

ಮಹಿಳೆ ಮೇಲೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ಜೊಮ್ಯಾಟೊ ಸಂಸ್ಥೆಯಲ್ಲಿ ಡಿಲೆವರಿ ಬಾಯ್​ ಆಗಿ ಕೆಲಸ ಮಾಡುತ್ತಿದ್ದ ಕಾಮರಾಜ್​ ಪರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಘಟನೆಯಿಂದ ನೊಂದಿರುವ ವ್ಯಕ್ತಿ ಕಾಮರಾಜ್​ ಅವರಿಗೆ ನ್ಯಾಯ ಸಿಗಬೇಕೆಂದು ಸಾಕಷ್ಟು ಮಂದಿ ಸೋಶಿಯಲ್​ ಮೀಡಿಯಾದ ಮೂಲಕ ಬೆಂಬಲ ನೀಡುತ್ತಿದ್ದಾರೆ. ಇದೀಗ ರಾಜ್ಯಸಭಾ ಸಂಸದ ಜಿಸಿ ಚಂದ್ರಶೇಖರ್ ಡೆಲಿವರಿ ಬಾಯ್ ಕಾಮರಾಜ್ ಅವರ ಬೆಂಬಲಕ್ಕೆ ನಿಂತಿದ್ದಾರೆ.

 

 

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಸಂಸದ ಜಿಸಿ ಚಂದ್ರಶೇಖರ್ ಅವರು ಕಾಮರಾಜ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಮಾನವೀಯತೆಯ ದೃಷ್ಟಿಯಿಂದ ಜೊಮ್ಯಾಟೋ ಡೆಲಿವರಿ ಕಾಮರಾಜು ಅವರ ಬೆಂಬಲಕ್ಕೆ ನಾನಿದ್ದೇನೆ. ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡ ಜನರಿಗೆ ಎಂದಿಗೂ ಅನ್ಯಾಯವಾಗಬಾರದು. ಹಾಗಾಗಿ ಪೊಲೀಸರು ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡಿಸಿ ಕಾಮರಾಜು ಅವರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸುತ್ತೇನೆ.” ಎಂದು ಜಿಸಿ ಚಂದ್ರಶೇಖರ್ ಅವರ​ ಪೋಸ್ಟ್​ ಮಾಡಿದ್ದಾರೆ.

ಏನಿದು ಘಟನೆ?
ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮಾಡೆಲ್‌ ಹಿತಾಶಾ, ತನ್ನ ಮೇಲೆ ಝೊಮ್ಯಾಟೋ ಡೆಲಿವರಿ ಬಾಯ್‌ ಕಾಮರಾಜ್‌ ಮೂಗಿಗೆ ಗುದ್ದಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದರು. ಝೊಮ್ಯಾಟೋ ಕಾಮರಾಜ್‌ ಅವರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಕಾಮರಾಜ್‌ ಬಂಧನವಾಗಿತ್ತು. ಇದೀಗ ಜಾಮೀನು ಪಡೆದು ಹೊರಬಂದಿರುವ ಕಾಮರಾಜ್‌, ತಾನು ಆಕೆಯ ಮೇಲೆ ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿ ಈ ಕಾರಣಕ್ಕೆ ತನ್ನ ಕೆಲಸ ಹೋಗಿದ್ದರ ಕುರಿತು ನೋವು ತೋಡಿಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top