fbpx
ಸಮಾಚಾರ

ಮುಂದಿನ ಚುನಾವಣೆ ಸ್ಪರ್ಧೆ ಮಾಡುವ ಕ್ಷೇತ್ರ ಯಾವುದು ಎಂದು ಈಗಲೇ ಘೋಷಿಸಿದ ಸಿದ್ದರಾಮಯ್ಯ

ಬಾದಾಮಿಯಲ್ಲಿ ಪ್ರಯಾಸದ ಗೆಲುವು ಪಡೆದ ಬಳಿಕ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಆದರೆ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದ ಸಿದ್ದರಾಮಯ್ಯ, ಈಗ 2023ರ ವಿಧಾನಸಭೆಯಲ್ಲಿ ಕೂಡ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಚುನಾವಣೆಗೂ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲೇ ಈ ಬಗ್ಗೆ ಘೋಷಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಎಲ್ಲಿಗೂ ಓಡಿಹೋಗುವುದಿಲ್ಲ. ಮುಂದಿನ ಬಾರಿಯೂ ಬಾದಾಮಿ ಕ್ಷೇತ್ರದಲ್ಲಿಯೇ ನಿಲ್ಲುತ್ತೇನೆ ಎಂದು ಹೇಳುವ ಮೂಲಕ ತಾನು ಬಾದಾಮಿಯಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಬಜೆಟ್‌ ಕುರಿತ ಚರ್ಚೆ ವೇಳೆ ವಿಷಯ ಪ್ರಸ್ತಾಪಿಸಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಂದಿನ ಬಾರಿ ನೀವು ಚುನಾವಣೆಗೆ ನಿಲ್ಲುತ್ತೀರೋ ಇಲ್ಲವೋ ಎಂಬ ಬಗ್ಗೆ ಹಲವು ಅನುಮಾನಗಳಿವೆ. ಅಂತಿಮವಾಗಿ ಸ್ಪರ್ಧಿಸುತ್ತಿದ್ದೀರೋ ಇಲ್ಲವೋ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ ಸದಸ್ಯ ಕೆ.ಆರ್‌. ರಮೇಶ್‌ಕುಮಾರ್‌, ಸ್ಪರ್ಧಿಸುವುದಿಲ್ಲ ಎಂದು ಹೇಳುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ. ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸಲೇಬೇಕು. ಮುಂದಿನ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಿ ಎಂದು ಹೇಳಿದರು.

ಈ ವೇಳೆ ಸಿದ್ದರಾಮಯ್ಯ, ನಾನು ಎಲ್ಲಿಗೂ ಓಡಿ ಹೋಗುವ ಪ್ರಶ್ನೆಯೇ ಇಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. 2018ರ ವಿಧಾನಸಭೆ ಚುನಾವಣೆ ವೇಳೆ ಸ್ಪರ್ಧಿಸುವ ಬೇಡ ಎಂದುಕೊಂಡಿದ್ದೆ. ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಎಲ್ಲೂ ಹೇಳಿಲ್ಲ ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top