fbpx
ಸಮಾಚಾರ

ಜೀನ್ಸ್ ಧರಿಸುವ ಹೆಣ್ಮಕ್ಕಳ ಬಗ್ಗೆ ಕಾಮೆಂಟ್ ಮಾಡಿದ ಬಿಜೆಪಿ ಸಿಎಂಗೆ ತಿರುಗೇಟು ನೀಡಿದ ಅಮಿತಾಬ್ ಬಚ್ಚನ್ ಮೊಮ್ಮಗಳು

ಹೊಸದಾಗಿ ನೇಮಕಗೊಂಡ ಉತ್ತರಾಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಆರಂಭದಲ್ಲೇ ವಿವಾದಕ್ಕೆ ಗುರಿಯಾಗಿದ್ದಾರೆ. ಹೆಣ್ಣು ಮಕ್ಕಳು ಧರಿಸುವ ಮಾಡ್ರನ್ ಡ್ರೆಸ್ ಬಗ್ಗೆ ಮಂಗಳವಾರ ಮಾತನಾಡಿರುವ ತಿರತ್ ಸಿಂಗ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ತಿರತ್ ಸಿಂಗ್ ಹೇಳಿದ್ದೇನು?
‘ಯುವತಿಯರು ಶ್ರೀಮಂತರ ಮಕ್ಕಳಂತೆ ಕಾಣಲು ಹರಿದ ಜೀನ್ಸ್​ ಧರಿಸಿ ಮೊಣಗಾಲು ತೋರಿಸುವುದು ಭಾರತೀಯ ಸಂಸ್ಕೃತಿ ಅಲ್ಲ. ಪಾಶ್ಚಾತ್ಯರು ನಮ್ಮನ್ನು ಫಾಲೋ ಮಾಡುತ್ತಿರುವಾಗ ನಾವು ಹೀಗೆ ಪಾಶ್ಚಾತ್ಯರನ್ನು ಅನುಸರಿಸುತ್ತಿದ್ದೇನೆ. ಇದರಿಂದ ಫೋಷಕರು ಮಕ್ಕಳಿಗೆ ಕೆಟ್ಟ ಮಾದರಿಯನ್ನು ಹೇಳಿಕೊಡುತ್ತಿದ್ದಾರೆ’ ಎಂದು ತಿರತ್​ ಸಿಂಗ್​ ರಾವತ್​ ಹೇಳಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ರಾಜ್ಯ ಆಯೋಗ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾವತ್ ಈ ರೀತಿ ಹೇಳಿಕೆ ನೀಡಿದ್ದಾರೆ. ರಿಪ್​ಡ್ ಜೀನ್ಸ್ ಸ್ಟೈಲ್ ಅನ್ನು ‘ಕತ್ತರಿ ಸಂಸ್ಕೃತಿ’ ಎಂದು ಹೇಳಿದ ರಾವತ್, ಹರಿದ ಜೀನ್ಸ್ ಧರಿಸಿ ಮೊಣಕಾಲು ತೋರಿಸಿದರೆ ಶ್ರೀಮಂತರು ಎಂದೆನಿಸಿಕೊಳ್ಳುವುದಿಲ್ಲ ಎಂಬುದನ್ನು ನಾವು ಕಲಿಸಿಕೊಡಬೇಕಿದೆ. ಹರಿದ ಜೀನ್ಸ್ ಧರಿಸಿ ನಾನು ನನ್ನ ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೇನೆ? ಮೊಣಕಾಲು ತೋರಿಸುವಲ್ಲಿ ಹುಡುಗಿಯರು ಕಮ್ಮಿಯೇನಿಲ್ಲ. ಇದೆಲ್ಲಾ ಸರಿಯೇ?. ಭಾರತದಲ್ಲಿರುವ ಜನರು ಹರಿದ ಜೀನ್ಸ್ ಧರಿಸುತ್ತಿದ್ದರೆ ಇತರ ದೇಶದ ಜನರು ಮೈಮುಚ್ಚಿಕೊಂಡು, ಯೋಗ ಕಲಿಯುತ್ತಿದ್ದಾರೆ ಎಂದಿದ್ದಾರೆ ರಾವತ್.

 

 

ಬಿಗ್ ಬಿ ಮೊಮ್ಮಗಳ ತಿರುಗೇಟು:
ಉತ್ತರಾಖಂಡ ಮುಖ್ಯಮಂತ್ರಿಯವರ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ ಎನ್ನುವ ಮೂಲಕ ಈ ವಿವಾದಾತ್ಮಕ ಹೇಳಿಕೆಗೆ ನಟ ಅಮಿತಾಬ್ ಬಚ್ಚನ್ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ನವ್ಯಾ ಹೀಗೆ ಬರೆದಿದ್ದಾರೆ. “ನಮ್ಮ ಬಟ್ಟೆಗಳನ್ನು ಬದಲಾಯಿಸುವ ಮೊದಲು ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ. ಇಲ್ಲಿ ಆಶ್ಚರ್ಯಕರವಾದ ವಿಷಯವೆಂದರೆ ನೀವು ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ ಎಂಬುದು” ಅಂತಾ ಮುಖ್ಯಮಂತ್ರಿ ವಿರುದ್ಧವೇ ಕಿಡಿಕಾರಿದ್ದಾರೆ.

ತಿರತ್ ಹೇಳಿಕೆ ತೀವ್ರ ಕೋಪವನ್ನು ವ್ಯಕ್ತಪಡಿಸಿರುವ ನವ್ಯಾ, ಆ ಪೋಸ್ಟ್ ನಂತರ, ತಮ್ಮ ಹರಿದ ಜೀನ್ಸ್​ವೊಂದರ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ. “ನಾನು ಸಹ ಹರಿದ ಜೀನ್ಸ್ ಧರಿಸುತ್ತೇನೆ. ಬಹಳ ಹೆಮ್ಮೆಯಿಂದ ಧರಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಬಿಗ್ ಬಿ ಮೊಮ್ಮಗಳ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಸಖತ್​​ ವೈರಲ್ ಆಗ್ತಿದ್ದು ಮೆಚ್ಚುಗೆಗೆ ಕಾರಣವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top