fbpx
ಸಮಾಚಾರ

ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್: ಕಾರಣವೇನು?

ಕೊರೊನಾ ಎರಡನೇ ಅಲೆಯಲ್ಲಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಸಿನಿಮಾ ಥಿಯೇಟರ್‌ಗಳಲ್ಲಿ ಮತ್ತೆ ಶೇ. 50 ಸೀಟು ನಿಯಮ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಇದೆ ವಿಚಾರವಾಗಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ನಟ ಪುನೀತ್ ರಾಜಕುಮಾರ್ ಬೇಸರದ ಮಾತುಗಳನ್ನ ಆಡಿದ್ದಾರೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಥಿಯೇಟರ್‌ಗಳಲ್ಲಿ ಮತ್ತೆ ಶೇ. 50 ಸೀಟು ನಿಯಮ ಜಾರಿ ಸಂಬಂಧ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಈಚೆಗಷ್ಟೇ ಥಿಯೇಟರ್‌ಗಳಲ್ಲಿ ಶೇ. 100 ಸೀಟು ಭರ್ತಿಗೆ ಅವಕಾಶ ನೀಡಲಾಗಿತ್ತು. ಆದರೆ ಮತ್ತೆ ಶೇ. 50 ಸೀಟು ನಿಯಮ ಜಾರಿ ಮಾಡಲು ಹೊರಟಿರುವುದು ಸಾಮನ್ಯವಾಗಿ ಚಿತ್ರರಂಗದ ಮಂದಿಗೆ ಬೇಸರ ತರಿಸಿದೆ.

ಈ ಬಗ್ಗೆ ಸ್ವತಃ ನಟ ಪುನೀತ್ ರಾಜಕುಮಾರ್ ಅವರು ಕೂಡ ಬೇಸರ ಹೊರಹಾಕಿದ್ದಾರೆ. ಚಿತ್ರಮಂದಿರಗಳಲ್ಲಿ ಸದ್ಯ ಜಾರಿಯಲ್ಲಿರುವ ಶೇ.100ರಷ್ಟು ಸೀಟು ಭರ್ತಿಯ ನಿಯಮವನ್ನು ಬದಲಿಸಬಾರದು ಎಂದು ಪುನೀತ್ ರಾಜ್‍ಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲಾಕ್‍ಡೌನ್‍ನಿಂದ ಸಂಕಷ್ಟಕ್ಕೀಡಾಗಿದ್ದ ಚಿತ್ರರಂಗ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಹೀಗಾಗಿ ಸಿನಿಮಾ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕೆಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸರ್ಕಾರ ರಾಜಕೀಯ ಸಭೆ, ಸಮಾರಂಭ, ರ್ಯಾಲಿಗಳನ್ನು ಬಂದ್ ಮಾಡಬೇಕು. ಆ ಮೂಲಕ ಕೊರೊನಾ ತಡೆಗಟ್ಟಬಹುದಾಗಿದೆ ರ್ಯಾಲಿಗಳಲ್ಲಿ ಸಾವಿರಾರು ಮಂದಿ ಬೇರೆ ಬೇರೆ ಊರುಗಳಿಂದ ಆಗಮಿಸುವುದರಿಂದ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇದನ್ನು ಬಿಟ್ಟು ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಸೀಟುಗಳಿಗೆ ಮಾತ್ರ ಅವಕಾಶ ನೀಡಲು ಮುಂದಾಗಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top