fbpx
ಸಮಾಚಾರ

ರಾಜ್ಯ ಬಾಲಕಾರ್ಮಿಕ ಯೋಜನೆ ಅಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ವಿಜಯಪುರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಸೇವೆ ಸಲ್ಲಿಸಲು ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗೆ ತಿಳಿಸಲಾದ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಹತೆಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ:
ಯೋಜನಾ ನಿರ್ದೇಶಕರು ಹುದ್ದೆಗಳಿಗೆ : ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ MSW / and Computer knowledge (M .S .Office and Internet operation ಕಡ್ಡಾಯ )

ಗುಮಾಸ್ತ ಕಂ ಲೆಕ್ಕಿಗ ಹುದ್ದೆಗಳಿಗೆ : B .Com and ಮತ್ತು Computer knowledge ( M .S .Office and Internet operation ಕಡ್ಡಾಯ )

ಜವಾನ್ ಹುದ್ದೆಗಳಿಗೆ : ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಏಪ್ರಿಲ್ 12, 2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 40 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆ ಹೇಗೆ?
ವೆಬ್‌ಸೈಟ್‌ ವಿಳಾಸ www.vijayapur.nic.in ಗೆ ಭೇಟಿ ನೀಡಿ, ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ, ಧೃಡೀಕೃತ ಎಲ್ಲಾ ದಾಖಲಾತಿಗಳೊಂದಿಗೆ ಖುದ್ದಾಗಿ ಅರ್ಜಿಯನ್ನು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಕಛೇರಿ, ಕಾರ್ಮಿಕ ಇಲಾಖೆ ಅಲ್ಲಾಪುರ ಓಣಿ ಸಿಂದಗಿ ನಾಕಾ, ವಿಜಯಪುರ ಈ ಕಛೇರಿಗೆ ಸಲ್ಲಿಸುವುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top