fbpx
ಸಮಾಚಾರ

ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ: ನೇಮಕಾತಿಗೆ ಅರ್ಜಿ ಅಹ್ವಾನ

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಜಯಪುರ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 26/03/2021 ಕೊನೆಯ ದಿನವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಹತೆ, ವಯೋಮಿತಿ, ಶುಲ್ಕ, ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ:
ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆ ಹಾಗೂ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ಶ್ರೇಣಿ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:
ಬೆರಳಚ್ಚುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು 200/-ರೂ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?
ಮಂಡ್ಯ ಜಿಲ್ಲಾ ನ್ಯಾಯಾಲಯದ ಅಫೀಶಿಯಲ್ ವೆಬ್‌ಸೈಟ್‌ https://districts.ecourts.gov.in/vijayapura ಗೆ ಭೇಟಿ ನೀಡಿ. ಅರ್ಜಿ ನಮೂನೆಯನ್ನು ಭರ್ತಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಜಯಪುರ ಜಿಲ್ಲೆ, ವಿಜಯಪುರ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03-04-2021 ಸಂಜೆ 04 ಗಂಟೆವರೆಗೆ.

ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top