fbpx
ಸಮಾಚಾರ

ಸ್ಟಾರ್ ನಟರ ಒತ್ತಡಕ್ಕೆ ಮಣಿದ ಸರ್ಕಾರ: ಚಿತ್ರೋದ್ಯಮಕ್ಕೆ ದೊಡ್ಡ ಗುಡ್ ನ್ಯೂಸ್ ಕೊಟ್ಟ ಯಡಿಯೂರಪ್ಪ

ಕಳೆದೊಂದು ವಾರದಿಂದ ರಾಜ್ಯದಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಮತ್ತೊಮ್ಮೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಲಿದೆ. ನೈಟ್​ ಕರ್ಫ್ಯೂ ಜಾರಿಯಾಗಲಿದೆ, ಥಿಯೇಟರ್​ಗಳಿಗೆ ಮತ್ತೆ ಶೇ 50 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಿದೆ ಎಂಬ ಊಹಾಪೋಹಾ ಹರಿದಾಡಿದ್ದವು. ಈ ಅಂತೆ ಕಂತೆಗಳಿಗೆ ಖುದ್ದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ತೆರೆ ಎಳೆದಿದ್ದು, ಆತಂಕದಲ್ಲಿದ್ದ ಚಿತ್ರರಂಗಕ್ಕೆ ನಿರಾಳತೆ ನೀಡಿದ್ದಾರೆ.

 

 

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು, ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಭೆ ನಡೆಸೋ ಬಗ್ಗೆ ಮನವಿ ಮಾಡಿರೋ ನಿರ್ಮಾಪಕರ ಸಂಘ ಯೋಚನೆ ಮಾಡಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಹೇಳಿಕೆ ನೀಡಿದ್ದರು. ತುಂಬಾ ದಿನಗಳ ನಂತರ ಚಿತ್ರಮಂದಿರ ಭರ್ತಿಗೆ ಅವಕಾಶ ನೀಡಲಾಗಿದೆ. ಈಗ ಮತ್ತೆ ಕ್ರಮಕ್ಕೆ ಮುಂದಾದರೆ ನಿರ್ಮಾಪಕರು ಸೇರಿದಂತೆ ಚಿತ್ರೋದ್ಯಮಕ್ಕೆ ನಷ್ಟ ಎಂಬ ವಿಚಾರವನ್ನು ಪುನೀತ್ ರಾಜ್ ಕುಮಾರ್ ಆದಿಯಾಗಿ ಅನೇಕರು ಹೇಳಿದ್ದರು .

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top