fbpx
ಸಮಾಚಾರ

ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿ: ವಿವಿಧ ಹುದ್ದೆಗೆ ಅರ್ಜಿ ಅಹ್ವಾನ

ತುಮಕೂರು ಜಿಲ್ಲಾ ಪಂಚಾಯಿತಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಹೊರ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಮಾರ್ಚ್ 15 ರಿಂದ 30ರ ತನಕ ಕಚೇರಿ ಕೆಲಸದ ದಿನಗಳಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯ ತನಕ ಸಲ್ಲಿಸಬಹು.

ವಿದ್ಯಾರ್ಹತೆ:
ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:
ತಾಲ್ಲೂಕು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಕನಿಷ್ಟ 21 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://tumkurzillapanchayat.gov.in/index.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಕುರಿತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top