fbpx
ಸಮಾಚಾರ

“ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಏಕಪತ್ನಿವ್ರತಸ್ಥರಾ?” ಸುಧಾಕರ್ ಬಾಂಬ್

ಆರು ಸಚಿವರು ತಮ್ಮ ವಿರುದ್ಧ ಮಾನಹಾನಿಯ ವರದಿ ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದೆಂದು ಕೋರಿ ಕೋರ್ಟ್ ಮೊರೆ ಹೋಗಿರುವ ಕುರಿತು ಪ್ರತಿಪಕ್ಷ ನಾಯಕರು ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ಇದರಿಂದ ರೊಚ್ಚಿಗೆದ್ದು ಹೋಗಿರುವ ಆಡಳಿತ ಪಕ್ಷದ ಸಚಿವರು ತೀಕ್ಷ್ಣವಾಗಿ ಪ್ರತಿಪಕ್ಷ ನಾಯಕರಿಗೆ ಸವಾಲು, ತಿರುಗೇಟು ನೀಡುತ್ತಿದ್ದಾರೆ. ಇಂದು ಮಾಧ್ಯಮಗಳ ಮುಂದೆ ತೀವ್ರ ಆಕ್ರೋಶದಿಂದ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಪ್ರತಿಪಕ್ಷದ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮರ್ಯಾದೆ ಪುರುಷರು, ಶ್ರೀರಾಮಚಂದ್ರ ಅನ್ಕೊಂಡು ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನೀವು ನಿಮ್ಮ ಜೀವನದಲ್ಲಿ ಅನೈತಿಕ ಸಂಬಂಧ ಇಟ್ಟುಕೊಂಡಿಲ್ವಾ? ಮಾನ್ಯ ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಇವರೆಲ್ಲಾ ಏನು ಏಕಪತ್ನಿವ್ರತಸ್ಥರಾ? ಯಾರಿಗೆ ಅನೈತಿಕ ಸಂಬಂಧ ಇದೆ, ವಿವಾಹವೇತರ ಸಂಬಂಧ ಇದೆ ಎಂಬುವುದು ಗೊತ್ತಾಗಲಿ. ಸಿಎಂ ಆಗಿದ್ದಾಗ ಯಾರು ಏನು ಮಾಡಿದ್ರು ಅನ್ನೋದು ಗೊತ್ತಾಗಲಿ. ನೈತಿಕತೆ ಬಗ್ಗೆ ಮಾತನಾಡೋರು ಮಾದರಿ ಆಗಿದ್ದರೆ ತನಿಖೆಗೆ ಎಲ್ಲರೂ ಒಪ್ಪಿಕೊಳ್ಳಲಿ ಎಂದು ಸವಾಲು ಹಾಕಿದರು.

ಯಾರು ಇವತ್ತು ಮರ್ಯಾದಾ ಪುರುಷರು, ಶ್ರೀರಾಮ ಚಂದ್ರರು ಎಂದು ಕಾಂಗ್ರೆಸ್, ಜೆಡಿಎಸ್ ನ ಸದಸ್ಯರು ಹೇಳಿಕೊಳ್ತಾ ಇದ್ದಾರೋ.. ಕಾಂಗ್ರೆಸ್​ನ 224 ಶಾಸಕರ ವಿರುದ್ಧವೂ ತನಿಖೆಗೆ ಆಗಲಿದೆ. ಯಾರೂ ಅನೈತಿಕ ಸಂಬಂಧ ಇಲ್ಲವಾ ಅಂತ ತನಿಖೆ ಆಗಲಿ. 225 ಜನರ ನೈತಿಕತೆಯೂ ತನಿಖೆಯಾಗಲಿ. ಯಾರು ಶ್ರೀರಾಮ ಚಂದ್ರ ಅಂತಾನೂ ರಾಜ್ಯದ ಜನರಿಗೆ ಗೊತ್ತಾಗಲಿ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರತಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top