fbpx
ಸಮಾಚಾರ

ಸಂಕಷ್ಟದಲ್ಲಿ ‘ಯುವರತ್ನ’; ಹೈಕೋರ್ಟ್​ ಮೆಟ್ಟಿಲೇರಿದ ಪ್ರಕರಣ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮುಖ್ಯ ಭೂಮಿಕೆಯ ಬಹು ನಿರೀಕ್ಷಿತ ಸಿನಿಮಾ ‘ಯುವರತ್ನ’ ಇದೆ ಏಪ್ರಿಲ್ 01ರಂದು ಬಿಡುಗಡೆಯಾಗುತ್ತಿದ್ದು ಸಿನಿ ರಸಿಕರು ಚಿತ್ರವನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾದಿದ್ದಾರೆ.. ಚಿತ್ರ ಬಿಡುಗಡೆಯ ಈ ಹೊತ್ತಿನಲ್ಲಿ ಅಬ್ಬರದ ಪ್ರಚಾರ ಕಾರ್ಯ ಕೈಗೊಂಡಿರುವ ‘ಯುವರತ್ನ’ ಚಿತ್ರತಂಡ ರಾಜ್ಯ ಪ್ರವಾಸ ಮಾಡುವ ಮೂಲಕ ಸಿನಿಮಾದ ಪ್ರೊಮೋಷನ್ ಮಾಡುತ್ತಿದ್ದಾರೆ..

ಈ ವೇಳೆ ಮಾಸ್ಕ್​ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊವಿಡ್​ ನಿಯಮವನ್ನು ಉಲ್ಲಂಘನೆ ಮಾಡಿತ್ತು. ಈ ವಿಚಾರ ಈಗ ಹೈಕೋರ್ಟ್​ ಮೆಟ್ಟಿಲೇರಿದೆ. ‘ಯುವರತ್ನ’ ಚಿತ್ರತಂಡದಿಂದ ಕೊವಿಡ್​ ನಿಯಮ ಉಲ್ಲಂಘನೆ ಆಗಿರುವ ಬಗ್ಗೆ ವಕೀಲ ಜಿ.ಆರ್.ಮೋಹನ್​ ಹೈಕೋರ್ಟ್​ಗೆ ಜ್ಞಾಪನಾ ಪತ್ರ ಸಲ್ಲಿಕೆ ಮಾಡಿದ್ದಾರೆ. ಜತೆಗೆ, ದಂಡ ಸ್ವೀಕರಿಸುವ ಅಧಿಕಾರಿಗಳ ಪಟ್ಟಿಯನ್ನು ಕೂಡ ಹೈಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಬಗ್ಗೆ ಸರ್ಕಾರ ಕೈಗೊಂಡ ಕ್ರಮದ ವಿವರಗಳನ್ನು ಏಪ್ರಿಲ್ 8ರೊಳಗೆ ನೀಡಲು ಸೂಚನೆ ಕೊಟ್ಟಿದೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿನಿಮಾ ಮಂದಿರಗಳಲ್ಲಿ ಮತ್ತೆ ಶೇ.50 ಆಸನಗಳಿಗೆ ಮಾತ್ರ ಅವಕಾಶ ಕಲ್ಪಿಸುವ ಸರ್ಕಾರದ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ್ದ ಪುನೀತ್, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ತಿಳಿಸಿದ್ದರು. ಆದರೆ, ಪ್ರಚಾರದ ಹೆಸರಿನಲ್ಲಿ ಸಾವಿರಾರು ಮಂದಿ ಸೇರುವಂತೆ ಮಾಡುತ್ತಿದ್ದಾರೆ. ಅಲ್ಲಿ ಸೇರಿದ ಜನರು ಮಾಸ್ಕ್ ಧರಿಸದೆ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮಗಳನ್ನು ಉಲ್ಲಂಸಿದ್ದಾರೆ ಎಂದು ಆರೋಪಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top