fbpx
ಸಮಾಚಾರ

ಸರ್ಕಾರೀ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಸರ್ಕಾರಿ ನೌಕರಿ ಪಡೆಯಬೇಕು ಎಂಬ ಆಸೆ ಇಟ್ಟುಕೊಂಡವರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ. ಕೊರೋನಾ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲು ಆರ್ಥಿಕ ಸ್ಥಿತಿಗತಿ ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲ ಕ್ರೋಢಿಕರಣದ ಉದ್ದೇಶದಿಂದ ನೇಮಕಾತಿಗಳನ್ನು ತಡೆ ಹಿಡಿಯಲಾಗಿತ್ತು. ಕಳೆದ ವರ್ಷ ನೇರ, ವೃಂದ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ತಡೆ ಹಿಡಿಯಲಾಗಿತ್ತು. ಆದರೆ ಈಗ ಪ್ರಸ್ತುತ ಎಲ್ಲಾ ನೇರ ನೇಮಕಾತಿಗಳನ್ನು ಮುಂದುವರೆಸಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ.

ಆಡಳಿತ ಇಲಾಖೆಗಳು ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂಬಂಧ ದಿನಾಂಕ 06-07-2020 ರ ಸುತ್ತೋಲೆಯಿಂದ ವಿನಾಯಿತಿಯನ್ನು ಕೋರಿ ಪ್ರಸ್ತಾವನೆಗಳನ್ನು ಸಲ್ಲಿಸಿದ್ದವು. ಈ ಹಿನ್ನೆಲೆ ಕೋವಿಡ್-19 ಕಾರಣ ತಡೆಹಿಡಿಯಲಾಗಿದ್ದ ನೇರ ನೇಮಕಾತಿ ಪ್ರಕ್ರಿಯೆಗೆ ಏಪ್ರಿಲ್ 01 ರಿಂದ ಚಾಲನೆ ನೀಡಲು ಅನುಮತಿಸಿದೆ.

ನೇಮಕಾತಿ ತಡೆ ಆದೇಶ ತೆರವು ಕುರಿತು ಪ್ರತಿಕ್ರಿಯಿಸಿರುವ ಹಣಕಾಸು ಇಲಾಖೆ ಕಾರ್ಯದರ್ಶಿ ಡಾ.ಏಕ್‌ರೂಪ್ ಕೌರ್ ‘2021-22ನೇ ಸಾಲಿನಲ್ಲಿ ನೇಮಕಾತಿ ಆದೇಶಗಳನ್ನು ನೀಡಲು ಅನುಮತಿ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಸ್ತಾವನೆಗಳ ಪೈಕಿ ಕೆಲವು ಪ್ರಸ್ತಾವನೆಗಳಿಗೆ ಮುಂದಿನ ಆರ್ಥಿಕ ವರ್ಷ ಅಂದರೆ 2021-22ನೇ ಸಾಲಿನಲ್ಲಿ ದಿನಾಂಕ 1/4/2021ರ ನಂತರ ನೇಮಕಾತಿ ಆದೇಶ ನೀಡಲು ಸಹಮತಿ ನೀಡಲಾಗಿದೆ ಎಂದು ತಿಳಿಸಲಾಗಿತ್ತು. ಈ ರೀತಿ ತಿಳಿಸಲಾದ ಪ್ರಸ್ತಾವನೆಗಳನ್ನು ದಿನಾಂಕ 1/4/2021ರ ನಂತರ ಆರ್ಥಿಕ ಇಲಾಖೆಯ ಪುನರ್ ಪರಿಶೀಲನೆಗೆ ಸಲ್ಲಿಸುವಂತೆ ಆಡಳಿತ ಇಲಾಖೆಗಳಿಗೆ ತಿಳಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top