fbpx
ಸಮಾಚಾರ

ಸದ್ದಿಲ್ಲದೇ ಸಾಂಸಾರಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ನಟಿ ಆಶಿತಾ ಚಂದ್ರಪ್ಪ: ವರ ಯಾರು ಗೊತ್ತಾ?

‘ಜೊತೆ ಜೊತೆಯಲಿ’, ‘ರಾಧಾ ರಮಣ’ ಧಾರಾವಾಹಿಯಲ್ಲಿ ನಟಿಸಿದ್ದ ನಟಿ, ಬಿಗ್ ಬಾಸ್ ಕನ್ನಡ ಸೀಸನ್ 5 ಸ್ಪರ್ಧಿ ಆಶಿತಾ ಚಂದ್ರಪ್ಪ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನೆನ್ನೆ (ಮಾರ್ಚ್ 31) ನಡೆದ ಸರಳ ವಿವಾಹ ಮಹೋತ್ಸವದಲ್ಲಿ ಆಶಿತಾ ಚಂದ್ರಪ್ಪ ಅವರು ರೋಹನ್ ರಾಘವೇಂದ್ರ ಎಂಬುವವರ ಜೊತೆ ಸಪ್ತಪದಿ ತುಳಿದಿದ್ದಾರೆ.

ಬೆಂಗಳೂರಿನ ಅಂಗನಾ ಕೋರ್ಟ್‌ಯಾರ್ಡ್‌ನಲ್ಲಿ ಬೆಳಗ್ಗೆ 9.30ಕ್ಕೆ ಧಾರೆ ಕಾರ್ಯಕ್ರಮವಿತ್ತು. ರೋಹನ್ ವೃತ್ತಿ ಜೀವನದ ಬಗ್ಗೆ ಹೆಚ್ಚಿನ ಮಾಹಿತಿ ದೊರಕಿಲ್ಲ. ಆದರೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಕೆಲವೇ ಕೆಲವು ಆಪ್ತರನ್ನು ಮಾತ್ರ ಶುಭ ಕಾರ್ಯಕ್ಕೆ ಆಹ್ವಾನಿಸಲಾಗಿತ್ತು. ನಿರ್ದೇಶಕ ಪನ್ನಗ ಭರಣ ಹಾಗೂ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಪ್ಲೋಡ್ ಮಾಡಿದ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ.

ಈ ಹಿಂದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಆಶಿತಾ ಲೀಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ನಂತರದಲ್ಲಿ ಅವರು ‘ರಾಧಾ ರಮಣ’ ಧಾರಾವಾಹಿಯಲ್ಲಿ ನಟಿಸಿದ್ದರು. ‘ಸ್ವಯಂವರ’ ಎಂಬ ಸಿನಿಮಾದಲ್ಲಿ ಆಶಿತಾ ಕಾಣಿಸಿಕೊಂಡಿದ್ದರು. ಬಿಗ್ ಬಾಸ್ ಕನ್ನಡ ಸೀಸನ್ 5ರ ಶೋನಲ್ಲಿ ಆಶಿತಾ ಭಾಗವಹಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top