fbpx
ಸಮಾಚಾರ

ಕ್ರಿಕೆಟ್​ ಮಾಂತ್ರಿಕ ಸಚಿನ್​ ತೆಂಡೂಲ್ಕರ್​ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವತಃ ಸಚಿನ್ ತೆಂಡೂಲ್ಕರ್ ಈ ಮಾಹಿತಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೋವಿಡ್ ಪಾಸಿಟಿವ್ ದೃಢವಾಗಿತ್ತು. ಬಳಿಕ ಅವರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆದರೆ ಇದೀಗ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

 

ಈ ಕುರಿತು ಸಚಿನ್ ತೆಂಡೂಲ್ಕರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಿಮ್ಮ ಹಾರೈಕೆಗೆ ಧನ್ಯವಾದಗಳು, ಕೊರೊನಾ ಸೋಂಕು ತಗುಲಿರುವ ಕಾರಣ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ, ಕೆಲವೇ ದಿನಗಳಲ್ಲಿ ಚೇತರಿಸಿಕೊಂಡು ಮನೆಗೆ ವಾಪಸಾಗುತ್ತೀನಿ ಎನ್ನುವ ನಂಬಿಕೆ ಇದೆ. ಪ್ರತಿಯೊಬ್ಬರು ನಿಮ್ಮ ಆರೋಗ್ಯದ ಬಗ್ಗೆ ನಿಗಾ ಇರಿಸಿ ಸುರಕ್ಷಿತವಾಗಿ ಮನೆಯಲ್ಲಿಯೇ ಇರಿ ಎಂದು ಸಲಹೆ ನೀಡಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಮಾರ್ಚ್ 27 ರಂದು ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿತ್ತು. ಈ ವಿಚಾರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದ ಸಚಿನ್, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನನಗೆ ಕೊರೊನಾ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳಿದ್ದು, ಮನೆಯ ಮಿಕ್ಕೆಲ್ಲರಿಗೂ ಕೊರೊನಾ ನೆಗೆಟಿವ್ ಬಂದಿದೆ. ಮುಂಜಾಗೃತಾ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿ ವೈದ್ಯರು ಸೂಚಿಸಿದ ಎಲ್ಲ ಸೂಚನೆಗಳನ್ನು ಅನುಸರಿಸುತ್ತಿದ್ದೇನೆ. ಕೊರೊನೊ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲ ಅಭಿಮಾನಿಗಳಿಗೂ ನಾವು ಕೃತಜ್ಞನಾಗಿದ್ದೇನೆ’ ಎಂದು ಟ್ವೀಟ್ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top