fbpx
ಸಮಾಚಾರ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉದ್ಯೋಗಾವಕಾಶ: 90 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 90 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಏಪ್ರಿಲ್ 24, 2021ರೊಳಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್‌.ಎಲ್‌.ಸಿ ವಿದ್ಯಾರ್ಹತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.

ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 21,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top