fbpx
ಸಮಾಚಾರ

ಬಿಜೆಪಿ ಸರ್ಕಾರದ ವಿರುದ್ಧ ನಟ ರಾಕಿಂಗ್ ಸ್ಟಾರ್ ಯಶ್ ಆಕ್ರೋಶ

ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರೂಪಿಸಿರುವ ಹೊಸ ನಿಯಮಾವಳಿ ವಿರುದ್ಧ ಯಶ್‌ ಸಿಡಿದೆದ್ದಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ ಕೈಗೊಳ್ಳೋದು ಬಿಟ್ಟು ಹೊಟ್ಟೆಹೊರೆಯಲು ಮಾಡುತ್ತಿರುವ ವೃತ್ತಿಗೆ ಹೀಗೆ ಹೊಡೆತ ನೀಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

 

 

ಜಿಮ್‌, ಫಿಟ್‌ನೆಸ್‌ ಸೆಂಟರ್‌ಗಳನ್ನು ಮುಚ್ಚಲು ಸರ್ಕಾರ ಆದೇಶ ನೀಡಿರೋದರ ವಿರುದ್ಧ ‘ಸೇವ್‌ ಫಿಟ್‌ನೆಸ್‌ ಇಂಡಸ್ಟ್ರಿ’ ಎಂಬ ಹೋರಾಟ ಸೋಷಿಯಲ್‌ ಮೀಡಿಯಾದಲ್ಲಿ ಆರಂಭವಾಗಿದೆ. ಸುರಕ್ಷತೆಯೊಂದಿಗೆ ಜಿಮ್‌ನಲ್ಲಿ ಶೇ.50 ಕಾರ್ಯಾಚರಣೆ ಅವಕಾಶ ನೀಡಬೇಕು ಎಂದು ಫಿಟ್‌ನೆಸ್‌ ಸಂಸ್ಥೆಯವರು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಇದೀಗ ಫಿಟ್‌ನೆಸ್‌ ಇಂಡಸ್ಟ್ರಿ ಹೋರಾಟಕ್ಕೆ ಯಶ್‌ ಬೆಂಬಲ ನೀಡಿದ್ದಾರೆ. ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಯಶ್ ಟ್ವೀಟ್:
‘ಅನ್ನ ಹುಟ್ಟಿಸದ ಸಭೆ, ಸಮಾರಂಭ, ಮೆರವಣಿಗೆಗಳು ಮುಕ್ತ. ಹೊಟ್ಟೆ ಹೊರಯಲು ಮಾಡುವ ವೃತ್ತಿಗಳಿಗೆ ಹೊಡೆತ. ಅಪಘಾತ ಆಗುವುದೆಂದು ವಾಹನ ಸಂಚಾರ ನಿಲ್ಲಿಸೋದು ಸರಿಯಾಗುತ್ತದೆಯೇ? ಕಟ್ಟುನಿಟ್ಟಿನ ಸಂಚಾರ ಕ್ರಮ ಸಾಕಲ್ಲವೇ? ಹಾಗೇ ಸಾಲ ಸೋಲ ಮಾಡಿ, ಜಿಮ್​ ನಡೆಸುವವರು ಕಷ್ಟ ಪಡುತ್ತಿದ್ದಾರೆ. ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಜಿಮ್​ ಬಳಸಲು ಅನುಮತಿ ನೀಡಿದರೆ, ಗ್ರಾಹಕರ ಆರೋಗ್ಯಕ್ಕೂ ಒಳ್ಳೆಯದು. ಜಿಮ್​ ಮಾಲೀಕರೂ ಬದುಕಿಕೊಳ್ಳುತ್ತಾರಲ್ಲವೇ? ರೋಗಕ್ಕೆ ಪರಿಹಾರ ಏನೆಂದು ನಮಗ್ಯಾರಿಗೂ ಗೊತ್ತಿಲ್ಲ, ಆದರೆ ಹಸಿವಿಗೆ ಪರಿಹಾರ ಗೊತ್ತಿದೆಯಲ್ಲ’ ಎಂದು ಯಶ್ ಅವರು ಟ್ವೀಟ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top