fbpx
ಸಮಾಚಾರ

ನಟಿ ಶ್ರುತಿ ಹಾಸನ್ ವಿರುದ್ಧ ಪ್ರಕರಣ ದಾಖಲು: ಕಾರಣವೇನು ಗೊತ್ತಾ?

ಖ್ಯಾತ ನಟಿ ಶ್ರುತಿ ಹಾಸನ್ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ತನ್ನ ತಂದೆಯೊಂದಿಗೆ ಮತಗಟ್ಟೆಗೆ ಭೇಟಿ ನೀಡುವಾಗ ಮತದಾನ ಕೇಂದ್ರದೊಳಗೆ ಅತಿಕ್ರಮಣ ಮಾಡಿದ್ದಾರೆಂದು ಆರೋಪಿಸಿ ಮಕ್ಕಳ್ ನೀಧಿ ಮೈಯಂ(ಎಂಎನ್ ಎಂ)ಮುಖ್ಯಸ್ಥ ಕಮಲ್ ಹಾಸನ್ ಅವರ ಪುತ್ರಿ ಶ್ರುತಿ ಹಾಸನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕಮಲ್ ಹಾಸನ್ ಮಕ್ಕಳಾದ ಶ್ರುತಿ ಮತ್ತು ಅಕ್ಷರಾ ಜತೆಗೆ ಚೆನ್ನೈನಲ್ಲಿ ಮತ ಚಲಾಯಿಸಿದ ಬಳಿಕ ಮತದಾನದ ಪ್ರಮಾಣದ ವಿವರ ಪಡೆಯಲು ಅಲ್ಲಿನ ಮತಗಟ್ಟೆಗಳಿಗೆ ಭೇಟಿ ನೀಡಿದ್ದರು. ತಮಿಳುನಾಡು ಚುನಾವಣೆಯಲ್ಲಿ ಗೆದ್ದರೆ ಹಣ ಹಂಚಿಕೆ ಮಾಡುವುದಾಗಿ ಭರವಸೆ ನೀಡುತ್ತಿದೆ ಎಂದು ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಇದೀಗ ಶ್ರುತಿ ಹಾಸನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕೊಯಮತ್ತೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಬಿಜೆಪಿ ರಾಷ್ಟ್ರೀಯ ಮಹಿಳಾ ವಿಭಾಗದ ನಾಯಕಿ ವನತಿ ಶ್ರೀನಿವಾಸನ್ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನಂದಕುಮಾರ್ ಅವರು ಜಿಲ್ಲಾ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದು, ಮತದಾನ ಕೇಂದ್ರಗಳಿಗೆ ಭೇಟಿ ನೀಡಿದ್ದಕ್ಕಾಗಿ ನಟಿ ಶ್ರುತಿ ಹಾಸನ್ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top