fbpx
ಸಮಾಚಾರ

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಸ್ಪತ್ರೆಗೆ ದಾಖಲು

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ಸಂಯೋಜಕ ಅರ್ಜುನ್ ಜನ್ಯಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೋನಾ ವೈರಲ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಜನ್ಯಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರಿಗೆ ಕೊರೋನಾ ವೈರಸ್ ನ ಯಾವುದೇ ರೋಗ ಲಕ್ಷಣಗಳು ಇಲ್ಲ ಎಂದು ತಿಳಿದುಬಂದಿವೆ.

ಈ ವಿಚಾರವನ್ನು ಸ್ವತಃ ಅರ್ಜುನ್ ಜನ್ಯ ಅವರೇ ಖಚಿತಪಡಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳ್ಸಿದ್ದಾರೆ. “ತಡವಾಗಿ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತು. ನಂತರ ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದೇನೆ” ಎಂದು ತಿಳಿಸಿದ್ದಾರೆ.

ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಮಾಧ್ಯಮಗಳಿಗೆ ಅರ್ಜುನ್ ಜನ್ಯ ಪ್ರತಿಕ್ರಿಯೆ ನೀಡಿದ್ದಾರೆ. ನೆಚ್ಚಿನ ಸಂಗೀತ ನಿರ್ದೇಶಕ ಕೊರೋನಾ ಕಾರಣದಿಂದ ಆಸ್ಪತ್ರೆ ಸೇರಿರುವ ವಿಚಾರ ತಿಳಿದು ಅವರ ಅಭಿಮಾನಿಗಳು ಜನ್ಯಾ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top