fbpx
ಸಮಾಚಾರ

ಖ್ಯಾತ ಚಿತ್ರಸಾಹಿತಿ ನಾಗೇಂದ್ರ ಪ್ರಸಾದ್ ಅವರಿಗೆ ಒಲಿದ ಡಾಕ್ಟರೇಟ್ ಗೌರವ

ಕನ್ನಡ ಚಲನಚಿತ್ರೋದ್ಯಮದ ಜನಪ್ರಿಯ ಗೀತರಚನೆಕಾರ ಹಾಗೂ ಸಂಗೀತ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್‍ರವರಿಗೆ ಹಂಪಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿದೆ. ಬಳ್ಳಾರಿಯಲ್ಲಿ ಹಂಪಿ ಕನ್ನಡ ವಿಶ್ವ ವಿದ್ಯಾಲಯದ 29ನೇ ಘಟಕೋತ್ಸವ ಕಾರ್ಯಕ್ರಮ ನಡೆದಿದ್ದು, ಈ ವೇಳೆ ನಾಗೇಂದ್ರ ಪ್ರಸಾದ್ ಅವರ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ.

 

ಈ ಬಗ್ಗೆ ಫೇಸ್ಬುಕ್ ಮೂಲಕ ಸಾಹಿತಿ ನಾಗೇಂದ್ರ ಪ್ರಸಾದ್ ಮಾಹಿತಿ ನೀಡಿದ್ದಾರೆ. ಕನ್ನಡ ಚಲನಚಿತ್ರ ಗೀತೆಗಳ ಸಾಮಾಜಿಕ ಪರಿಣಾಮ: ಒಂದು ಅಧ್ಯಯನ’ ಎಂಬ ವಿಷಯ ಕುರುತು ಡಿ.ಲಿಟ್(ಡಾಕ್ಟರ್ ಆಫ್ ಲಿಟರೇಚರ್) ಪದವಿಗೆ ಸಂಶೋಧನೆ ಅಧ್ಯಯನ ನಡೆಸಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ್ದರು. ಈ ಡಿ. ಲಿಟ್ ಮಹಾಪ್ರಬಂಧಕ್ಕೆ ಕ್ನನಡ ವಿಶ್ವವಿದ್ಯಾಲಯ, ಹಂಪಿಯು, ಇಂದು ತನ್ನ 29ನೇ ನುಡಹಬ್ಬದಲ್ಲಿ ನನಗೆ ಡಾಕ್ಟರೇಟ್ ಪದವಿಯನ್ನು ನೀಡಿತು. ಈ ಸಂತಸದ ವಿಷಯವನ್ನು ತಮ್ಮೊಂದಿಗೆ ಹಂಚಿಕೊಳ್ಳುವ ಮನಸಾಯಿತು. ನಿಮ್ಮ ಒಲುಮೆಯೇ ನನ್ನನ್ನು ಸದಾ ಪೋಷಿಸಿದೆ. ಪ್ರೋತ್ಸಾಹಿಸಿದೆ. ಧನ್ಯವಾದಗಳು ಎಂದು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಫೋಟೋ ಜೊತೆ ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

‘ಗಾಜಿನ ಮನೆ’ ಮೂಲಕ 22 ವರ್ಷಗಳ ಹಿಂದೆ ಚಿತ್ರೋದ್ಯಮ ಪ್ರವೇಶಿಸಿದ ಡಾ. ನಾಗೇಂದ್ರ ಪ್ರಸಾದ್ ಅವರು ಚಂದನವನದಲ್ಲಿ ನಟ, ಗೀತ ರಚನೆಕಾರ, ಸಂಗೀತಗಾರ, ನಿರ್ದೇಶಕ, ಸಂಭಾಷಣೆಕಾರ.. ಹೀಗೆ ಇನ್ನೂ ನಾನಾ ಅವತಾರಗಳಲ್ಲಿ ಮಿಂಚಿ, ಕನ್ನಡಿಗರ ಹೃದಯಗೆದ್ದಿದ್ದಾರೆ. ಕಿರುತೆರೆಯಲ್ಲೂ ಮಿಂಚಿರುವ ಡಾ. ನಾಗೇಂದ್ರ ಪ್ರಸಾದ್ ಅವರದು ನಾಟಕ, ಬೀದಿ ನಾಟಕಗಳಲ್ಲೂ ಎತ್ತಿದ ಕೈ. ಸಾವಿರಾರು ಚಲನಚಿತ್ರಗಳಲ್ಲಿ 3,000ಕ್ಕೂ ಹೆಚ್ಚು ಹಾಡುಗಳನ್ನು ರಚಿಸಿದ್ದಾರೆ. ಭಕ್ತಿಗೀತೆ, ದೇಶಭಕ್ತಿ ಗೀತೆ, ಭಾವಗೀತೆ, ಜನಪದ ಗೀತೆ, ಧಾರಾವಾಹಿ, ಆಲ್ಬಂಗಳಿಗೆ ಹಾಡು ಬರೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top