fbpx
ಸಮಾಚಾರ

ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಆಸ್ಪತ್ರೆಗೆ ದಾಖಲು!

ಶ್ರೀಲಂಕಾ ಕ್ರಿಕೆಟ್ ದಂತಕತೆ, ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರು ಚೆನ್ನೈಯಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಮುರಳೀಧರನ್ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.

 

 

ಹೃದಯದ ಸಮಸ್ಯೆಯಿಂದ ಮುರಳೀಧರನ್ ಅವರನ್ನು ಏಪ್ರಿಲ್ 18ರಂದು ಸಂಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ವೇಳೆ ಅವರಿಗೆ ಹೃದಯದ ಸಮಸ್ಯೆ ಇರುವುದು ಪತ್ತೆಯಾಗಿದ್ದು ಹೃದಯದ ಸ್ಟೆಂಟ್ ಹಾಕಲಾಗುತ್ತದೆ. ಹೃದಯದ ಸಮಸ್ಯೆ ಇರುವುದರಿಂದ ಮುತ್ತಯ್ಯ ಮುರಳೀಧರನ್ ಅವರು ಆ್ಯಂಜಿಯೋಪ್ಲ್ಯಾಸ್ಟಿ ಪ್ರಕ್ರಿಯೆಗಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಲ್ಲಿ ತಿಳಿದು ಬಂದಿದೆ.

ಮುತ್ತಯ್ಯ ಮುರಳೀಧರನ್ 2015ರಿಂದ ಸನ್‌ರೈಸರ್ಸ್ ಹೈದರಾಬಾದ್‌ನ ಬೌಲಿಂಗ್ ಕೋಚ್ ಮತ್ತು ಮಾರ್ಗದರ್ಶಕರಾಗಿದ್ದಾರೆ. 14ನೇ ಆವೃತ್ತಿಯಲ್ಲಿ ಹೈದರಾಬಾದ್ ತಂಡ ಸತತ ಮೂರು ಸೋಲುಗಳನ್ನು ಅನುಭವಿಸಿದೆ. ಏಪ್ರಿಲ್ 17ಕ್ಕಷ್ಟೇ ಮುರಳೀಧರನ್ 49ನೇ ಹರೆಯಕ್ಕೆ ಕಾಲಿರಿಸಿದ್ದರು. ಹುಟ್ಟುಹಬ್ಬರ ಮರುದಿನವೇ ಮುರಳೀಧರನ್ ಆಸ್ಪತ್ರೆಗೆ ದಾಖಲಾಗುವಂತಾಗಿದ್ದು ದುರದೃಷ್ಟಕರ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top