fbpx
ಸಮಾಚಾರ

ಬ್ರೇಕಿಂಗ್ ನ್ಯೂಸ್: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್ ಕೊಟ್ಟ ಸರ್ಕಾರ

ಕರ್ನಾಟಕದದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯಿಲ್ಲದೇ 1ರಿಂದ9 ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಆದೇಶವನ್ನು ಶಿಕ್ಷಣ ಇಲಾಖೆ ಅಧಿಕೃತವಾಗಿ ಹೊರಡಿಸಿದೆ.

ಮಂಗಳವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರೀಕ್ಷೆಗಳನ್ನು ನಡೆಸದೇ ವಿಶ್ಲೇಷಣಾ ಮೌಲ್ಯಾಂಕನಧ ಆಧಾರದ ಮೇಲೆ ಪಾಸು ಮಾಡಲು ತೀರ್ಮಾನಿಸಲಾಗಿದೆ.

ಕರ್ನಾಟದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಪ್ರತಿನಿತ್ಯ ಕೋವಿಡ್ ಸಾವಿನ ಸಂಖ್ಯೆ ಕೂಡ ಏರುತ್ತಲೇ ಇದೆ. ಈಗಾಗಲೇ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಕೋನದಿಂದ ಹತ್ತು ಹಲವು ಕ್ರಮಗಳನ್ನು ಅನುಸರಿಸಲಾಗಿದ್ದು. ಇದೀಗ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ನಿರ್ಧಾರವನ್ನು ಕೈಗೊಂಡಿದೆ.

“1 ರಿಂದ 9ನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮತ್ತು ಫಲಿತಾಂಶ ಪ್ರಕಟಣೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ತರಗತಿವಾರು ನಿರ್ಧಾರ ಕೈಗೊಂಡಿದೆ” ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top