fbpx
ಸಮಾಚಾರ

‘ಬಿಬಿಎಂಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಕೋವಿಡ್ ನಿರ್ವಹಣೆ ಬಗ್ಗೆ ನಟಿ ಅನು ಪ್ರಭಾಕರ್ ಬೇಸರ

ಇಡೀ ಜಗತ್ತು ಕರೋನಾ ಅನ್ನೋ ಕೊಂದು ಬಿಸಾಡುವ ವೈರಸ್ಸಿನ ಭಯಕ್ಕೆ ಬಿದ್ದಿದೆ. ಅದರ ಎಫೆಕ್ಟು ನೇರವಾಗಿ ಜನಸಾಮಾನ್ಯರ ಜೀವನದ ಮೇಲೆ ಪರಿಣಾಮ ಭೀರುತ್ತಿದೆ. ದಿನಕಳೆದಂತೆ ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರು ಕೊರೊನಾ ಪಾಲಿಗೆ ಹಾಟ್‌ಸ್ಪಾಟ್ ಆಗಿದೆ. ಜನಸಾಮಾನ್ಯರು ಮಾತ್ರವಲ್ಲದೆ, ರಾಜಕಾರಣಿಗಳು, ಸಿನಿಮಾ ತಾರೆಯರಿಗೂ ಕೊರೊನಾ ತಗುಲುತ್ತಿದೆ. ಇದೀಗ ನಟಿ ಅನು ಪ್ರಭಾಕರ್ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

 

 

ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ. ಕೊರೋನಾ ಪಾಸಿಟಿವ್ ಗೆ ಒಳಗಾಗಿರುವ ನಟಿ ಅನು ಪ್ರಭಾಕರ್ ಕೂಡ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.

 

 

ಮೊನ್ನೆ ಏಪ್ರಿಲ್ 17ರಂದು ನಟಿ ಅನು ಪ್ರಭಾಕರ್ ಗೆ ಕೊರೋನಾ ಸೋಂಕು ಇರುವುದು ಗೊತ್ತಾಯಿತು. ಅದಾಗಿ ಐದು ದಿನ ಕಳೆದರೂ ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಡೆಯಿಂದ ಪ್ರತಿಕ್ರಿಯೆಯೇ ಬಂದಿಲ್ಲವಂತೆ. ಕೊರೋನಾ ದೃಢಪಟ್ಟು 5 ದಿನವಾಗಿದೆ, ಹೋಂ ಐಸೊಲೇಷನ್ ನಲ್ಲಿದ್ದೇನೆ. ಆದರೆ ಬಿಬಿಎಂಪಿ ಕಡೆಯಿಂದ ಯಾವ ಫೋನ್ ಬಂದಿಲ್ಲ, ಕೋವಿಡ್ ವಾರ್ ವೆಬ್ ಸೈಟ್ ನಲ್ಲಿ ತಮ್ಮ ಹೆಸರು ಅಪ್ಡೇಟ್ ಕೂಡ ಆಗಿಲ್ಲ, ಇನ್ನೂ ನನಗೆ ಬಿಯು ಸಂಖ್ಯೆ ಬಂದಿಲ್ಲ, ಈ ವಿಷಯವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರ ಟ್ವಿಟ್ಟರ್ ಖಾತೆಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top