fbpx
ಸಮಾಚಾರ

ಐಪಿಎಲ್ ನಲ್ಲಿ ಮತ್ತೊಂದು ಸಾರ್ವಕಾಲಿಕ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ದೊಡ್ಡ ಮೈಲಿಗಲ್ಲೊಂದನ್ನು ನೆಟ್ಟಿದ್ದಾರೆ. ಐಪಿಎಲ್‌ನಲ್ಲಿ 6000 ರನ್‌ಗಳಿಸಿದ ಪ್ರಥಮ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಈ ಸಾಧನೆಯನ್ನು ಕೊಹ್ಲಿ ಪೂರ್ಣಗೊಳಿಸಿದ್ದಾರೆ.

ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ 5,949 ರನ್ ಗಳಿಸಿದ್ದರು. ಇನ್ನು ಇಂದಿನ ಪಂದ್ಯದಲ್ಲಿ 51 ರನ್ ಹೊಡೆಯುವ ಮೂಲಕ 6 ಸಾವಿರ ರನ್ ಗಳ ಗಡಿಯನ್ನು ದಾಟಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಎರಡು ದಾಖಲೆ ಬರೆದಿದ್ದಾರೆ.

ಕೊಹ್ಲಿ ಐಪಿಎಲ್ ನಲ್ಲಿ 6 ಸಾವಿರ ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದು, ಇದೇ ವೇಳೆ ಒಂದೇ ತಂಡದ ಪರವಾಗಿ ಆಡಿ 6 ಸಾವಿರ ರನ್ ಸಿಡಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2008ರಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಪರ ಐಪಿಎಲ್‌ ಪಯಣ ಆರಂಭಿಸಿದ್ದ ವಿರಾಟ್‌, ಬರೋಬ್ಬರಿ 13 ವರ್ಷಗಳ ಕಾಲ ಒಂದೇ ತಂಡದಲ್ಲಿ ಆಡಿದ್ದಾರೆ. ಇದೀಗ ಅವರು ತಮ್ಮ ವೈಯಕ್ತಿಕ ದಾಖಲೆಯನ್ನು ಇನ್ನಷ್ಟು ಉತ್ತಮ ಪಡಿಸಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top