fbpx
ಸಮಾಚಾರ

“80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ”- ಮೋದಿ ಸರ್ಕಾರದ ಮಹಾಘೋಷಣೆ

ಕೊರೋನಾ ವೈರಸ್ ಹೊಡೆತಕ್ಕೆ ನಲುಗಿರುವ ಭಾರತ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಕೊರೋನಾ ಅತೀಯಾಗಿರುವ ರಾಜ್ಯಗಳಲ್ಲಿ ಸೆಕ್ಷನ್ 114 , ಸೆಮಿ ಲಾಕ್‌ಡೌನ್ ಸೇರಿದಂತೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಇದೀಗ ಮತ್ತೆ ಆರ್ಥಿಕ ಸಂಕಷ್ಟ ಎದುರಾಗಿದೆ. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇದೀಗ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಬಡವರಿಗೆ 2 ತಿಂಗಳು ಉಚಿತ ಅಕ್ಕಿ, ಆಹಾರ ಧಾನ್ಯ ನೀಡುವುದಾಗಿ ಘೋಷಿಸಿದೆ.

ಶುಕ್ರವಾರ ಈ ಕುರಿತು ಘೋಷಣೆ ಮಾಡಿರುವ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ಹಾಗೂ ಜೂನ್ 2 ತಿಂಗಳು ಉಚಿತ ಆಹಾರ ಧಾನ್ಯ ನೀಡುವುದಾಗಿ ತಿಳಿಸಿದೆ. ಒಟ್ಟು 80 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ.ಉಚಿತ ಆಹಾರ ಧಾನ್ಯ ನೀಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯದ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ.

ಕರೋನಾ ವೈರಸ್‌ನ ಎರಡನೇ ಅಲೆಯನ್ನು ದೇಶ ಎದುರಿಸುತ್ತಿರುವಾಗ ದೇಶದ ಬಡವರಿಗೆ ಪೌಷ್ಠಿಕಾಂಶದ ಬೆಂಬಲ ನೀಡಬೇಕಾದುದು ನಮ್ಮ ಕರ್ತವ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೇಂದ್ರ ಸರಕಾರ ಈ ಕಾರ್ಯಕ್ರಮಕ್ಕೆ ರೂ 26,000 ಕೋಟಿ ನೀಡಲು ನಿರ್ಧರಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ ಎಂದು ಅವರ ಕಾರ್ಯಾಲಯ ಹೇಳಿದೆ. ಕಳೆದ ವರ್ಷ ಈ ಕುರಿತು ಯಾವ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಪ್ರಧಾನಿ ಈ ಬಾರಿ ಮೊದಲೆ ಎಚ್ಚೆತ್ತುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top