fbpx
ಸಮಾಚಾರ

ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿ ಕೋವಿಡ್-19 ಗೆ ಬಲಿ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವೇದಾ ತಾಯಿ ಚೆಲುವಾಂಬ ಅವರಿಗೆ 67 ವರ್ಷ ವಯಸ್ಸಾಗಿತ್ತು.

ಜ್ವರದಿಂದ ಬಳಲುತ್ತಿದ್ದ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಇದೇ ಏಪ್ರಿಲ್ 20ರಂದು ಅವರಿಗೆ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗಿದೆ. ಮನೆಯಲ್ಲಿ ನಿಗಾ ವ್ಯವಸ್ಥೆಯಲ್ಲಿ ಇದ್ದ ಚೆಲುವಾಂಬ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದ ಹಿನ್ನಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಉಸಿರಾಟದ ಸಮಸ್ಯೆಯಾಗಿ ಮೃತಪಟ್ಟರು.

ಚೆಲುವಾಂಬ ಅವರ ಮೃತದೇಹವನ್ನ ಮನೆಯವರು ತಮ್ಮ ವಶಕ್ಕೆ ನೀಡುವಂತೆ ಕೇಳಿದ್ದರು. ಆದರೆ ತಾಲೂಕು ಆಡಳಿತ ಕೊರೊನಾದಿಂದ ಸಾವನ್ನಪ್ಪಿರೋ ಕಾರಣ ಮೃತದೇಹವನ್ನ ನೀಡೋದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದು, ಮೃತ ಚೆಲುವಾಂಬ ಮನೆಯವರು ಎಲ್ಲಿ ಹೇಳುತ್ತಾರೋ ಅಲ್ಲೇ ತಾಲೂಕು ಆಡಳಿತದ ವತಿಯಿಂದಲೇ ಕೊರೊನಾ ಗೈಡ್ ಲೈನ್ ಮೂಲಕವೇ ಅಂತ್ಯ ಸಂಸ್ಕಾರ ನಡೆಸೋದಕ್ಕೆ ತಾಲೂಕು ಆಡಳಿತ ಸಜ್ಜಾಗಿದ್ದಾರೆ.

ಕಳೆದ ಜನವರಿ 12ರಂದು ಚೆಲುವಾಂಬ ಅವರು ತಮ್ಮ ಪತಿ ಹಾಗೂ ಮಗಳು ವೇದಾಕೃಷ್ಣಮೂರ್ತಿ ಅವರ ಜೊತೆಗೆ ತಮ್ಮ 67ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಸಂಭ್ರಮಿಸಿದ್ದರು. ಇಂದು ಚೆಲುವಾಂಬ ಅವರು ಪತಿ ಮತ್ತು ಮಗಳು ವೇದಾ ಕೃಷ್ಣಮೂರ್ತಿ ಅವರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top