fbpx
ಸಮಾಚಾರ

ಸಾವಿನ ಮನೆ ಬಾಗಿಲು ತಟ್ಟಿ ವಾಪಸ್ಸಾದ ಕೋಮಲ್

ಕೊರೊನಾ ವೈರಸ್​ ಎರಡನೇ ಅಲೆಗೆ ಜನಸಾಮಾನ್ಯರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಯಾತನೆ ಅನುಭವಿಸುವಂತಾಗಿದೆ. ಅನೇಕ ಕಲಾವಿದರು ಕೊವಿಡ್​ ಸೋಂಕಿಗೆ ಒಳಗಾಗಿ ಕಷ್ಟಪಡುತ್ತಿದ್ದಾರೆ. ಸೋಮವಾರವಷ್ಟೇ (ಏ.26) ನಿರ್ಮಾಪಕ ಕೋಟಿ ರಾಮು ಕೊರೊನಾ ವೈರಸ್​ಗೆ ಬಲಿ ಆಗಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ನಟ ಕೋಮಲ್​ ಕುಮಾರ್​ ಅವರಿಗೂ ಈ ಮಹಾಮಾರಿ ತಗುಲಿತ್ತು. ಆದರೆ ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

 

 

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಹೇಳಿಕೊಂಡಿರುವ ನಟ ಜಗ್ಗೇಶ್ “ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ! ಅವನಿಗೆ ಸಹಾಯ ಮಾಡಿದ ಡಾ: ಮಧುಮತಿ, ನಾದನಿ ಡಾ ಲಲಿತ ನರ್ಸಗಳ ಪಾದಕ್ಕೆ ನನ್ನ ನಮನ,” ಎಂದಿದ್ದಾರೆ.

 

 

 

ಅಲ್ಲದೆ “ನಾನು ಇಷ್ಟುದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ ಮಾತ್ರ ಗೊತ್ತು! ಭಕ್ತನ ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ! ಅದು ಒಂದೆ ರಾಯರೆ ನಾನು ಕಾಯವಾಚಮನ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗು ಕೇಡುಬಯಸದೆ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗು ಭುಜಕೊಟ್ಟು ಬದುಕಿದ್ದರೆ, ನನ್ನ ತಂ ದೆತಾಯಿಯನ್ನು ನೋಹಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆ ಸೇವೆ ನಿಷ್ಟೆಯಿಂದ ಮಾಡಿದ್ದರೆ, ಕಾಯಕಮಾಡುವ ಎಲ್ಲಾ ಕ್ಷೇತ್ರದಲ್ಲು ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯಲ್ಲಿದ್ದರೆ ಸಾವಿನಮನೆ ಕದತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು! ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದುಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು!”

 

 

“komal is safe ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ! ಆದರೆ ಇತ್ತೀಚೆಗೆ ತನಗೆ ಬರಬೇಕಾದ billಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು! ಅದ ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ!ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ!” ಎಂದಿದ್ದಾರೆ.

”ಕೋಮಲ್ ಆಸ್ಪತ್ರೆಗೆ ಎರಡು ವಾರಗಳ ಹಿಂದೆ ಸೇರಿಸುವಾಗ ಎಲ್ಲರೂ ಕಂಗಾಲಾದರು. ನಾನು 18 ಅಧ್ಯಾಯ ಭಗವದ್ಗೀತೆ ಓದಿ ಮುಗಿಸಿ ಅವನೊಟ್ಟಿಗೆ ರಾಯರ ಅಕ್ಷತೆ, ಮೃತ್ತಿಕೆ, ರಾಯರ ಬೃಂದಾವನ ತೊಳೆಯುವ ಪವಿತ್ರ ಜಲ ಕಳಿಸಿಕೊಟ್ಟೆ. ಮಿಕ್ಕಿದ್ದು ರಾಯರ ಪವಾಡ. 80% ಶ್ವಾಸಕೋಶಕ್ಕೆ ಹೊಕ್ಕಿ 80ಕ್ಕೆ ಇಳಿದಿದ್ದ ಆಕ್ಸಿಜನ್ ಇಂದು 98ಕ್ಕೆ ಬಂದಿದೆ. ಭವರೋಗವೈದ್ಯ ಗುರುರಾಯರು ಗುರುಭ್ಯೋ ನಮಃ” ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top