fbpx
ಸಮಾಚಾರ

“ಬಿಜೆಪಿ ಸರ್ಕಾರದ ವಿರುದ್ಧ ಟೀಕೆ” ನಟ ಸಿದ್ದಾರ್ಥಗೆ ಕೊಲೆ ಬೆದರಿಕೆ

ತಮಿಳುನಾಡು ಬಿಜೆಪಿ ಐಟಿ ಸೆಲ್​ ನನ್ನ ಫೋನ್​ ನಂಬರ್​ ಸೋರಿಕೆ ಮಾಡಿದ್ದು, ಸಾಕಷ್ಟು ನಿಂದನೆಗಳು, ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕಾಲಿವುಡ್​ ನಟ ಸಿದ್ಧಾರ್ಥ್​ ಗಂಭೀರ ಆರೋಪ ಮಾಡಿದ್ದಾರೆ.

 

 

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧಾರ್ಥ್, “ನನ್ನ ಫೋನ್ ನಂಬರ್ ನ್ನು ತಮಿಳುನಾಡು ಬಿಜೆಪಿ ಹಾಗೂ ತಮಿಳುನಾಡು ಬಿಜೆಪಿ ಐಟಿ ಸೆಲ್‍ನವರು ಲೀಕ್ ಮಾಡಿದ್ದಾರೆ. ಸುಮಾರು 500ಕ್ಕೂ ಹೆಚ್ಚು ನಿಂದನೆ, ಅತ್ಯಾಚಾರ ಹಾಗೂ ಕೊಲೆ ಬೆದರಿಕೆಯ ಕರೆಗಳು ಬರುತ್ತಿವೆ. ಕಳೆದ 24 ಗಂಟೆಗಳಿಂದ ನನಗೆ ಹಾಗೂ ನನ್ನ ಕುಟುಂಬದವರಿಗೆ ಬೆರಿಕೆ ಕರೆಗಳು ಬರುತ್ತಿವೆ.”

” ಬಿಜೆಪಿಯ ಲಿಂಕ್ ಹಾಗೂ ಡಿಪಿಗಳೊಂದಿಗೆ ಎಲ್ಲ ನಂಬರ್‍ಗಳನ್ನು ದಾಖಲಿಸಿದ್ದೇನೆ ಹಾಗೂ ಪೊಲೀಸರಿಗೆ ಹಸ್ತಾಂತರಿಸುತ್ತಿದ್ದೇನೆ. ನಾನು ಸುಮ್ಮನಿರುವುದಿಲ್ಲ, ಪ್ರಯತ್ನಿಸುತ್ತಲೇ ಇರುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಟ್ವೀಟ್‍ನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

 

 

ಸಾಮಾಜಿಕ ಜಾಲತಾಣದಲ್ಲಿ ನೇರವಾಗಿ ಬೆದರಿಕೆ ಹಾಕಿರುವ ಕೆಲವರ ಸ್ಕ್ರೀನ್​ ಶಾಟ್​ಗಳನ್ನು ಶೇರ್​ ಮಾಡಿಕೊಂಡಿರುವ ಸಿದ್ಧಾರ್ಥ, “ತಮಿಳುನಾಡಿನ ಬಿಜೆಪಿ ಸದಸ್ಯರು ನನಗೆ ಕಿರುಕುಳ ನೀಡಲು ಕೆಲ ಕಿಡಿಗೇಡಿಗಳನ್ನು ಛೂ ಬಿಟ್ಟಿದ್ದಾರೆ. ಹೀಗಾಗಿ ನಿನ್ನೆಯಿಂದ ಅನೇಕರು ನನ್ನ ಮೇಲೆ ಜಾಲತಾಣದಲ್ಲಿ ದಾಳಿ ಮಾಡುತ್ತಿದ್ದಾರೆ. ನಾವು ಕೋವಿಡ್​ನಿಂದ ಬದುಕಬಹುದು. ಆದರೆ, ಇಂತಹ ಜನರಿಂದ ಬದುಕುತ್ತೇವೆಯೇ?” ಎಂದು ಪ್ರಶ್ನಿಸಿದ್ದಾರೆ.

ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಒಳಪಡುತ್ತಿದೆ. ಅಂದಹಾಗೆ ಕೋವಿಡ್ ನಿರ್ವಹಣೆ ವಿಚಾರವಾಗಿ ಸಿದ್ಧಾರ್ಥ್ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top