fbpx
ಸಮಾಚಾರ

ಸ್ಟಾರ್ ನಟನ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವೈರಲ್ ಗಾಯಕಿ ಮಂಗ್ಲಿ

ಸಿಂಗರ್ ಮಂಗ್ಲಿ ಕಣ್ಣೇ ಅದಿರಿಂದಿ ಎನ್ನುವ ಮೂಲಕವಾಗಿ ಎಲ್ಲರ ಗಮನವನ್ನು ಸೆಳೆದಿದ್ದರು. ಹಾಡಿನಿಂದ ಮೋಡಿ ಮಾಡಿರುವ ಮಂಗ್ಲಿ ಇದೀಗ ತಮ್ಮ ನಟನೇ ಮೂಲಕವಾಗಿ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರವಾಗಲಿದ್ದಾರೆ.

 

 

ಶಿವರಾಜ್‌ಕುಮಾರ್ ಅಭಿನಯದ 124ನೇ ಚಿತ್ರನ್ನು ರಾಮ್ ಧುಲಿಪುಡಿ ನಿರ್ದೇಶನ ಮಾಡಲಿದ್ದಾರೆ. ಬಾಲಶ್ರೀರಾಮ್ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ಧುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ಇನ್ನೂ ಟೈಟಲ್ ಇಟ್ಟಿಲ್ಲ. ಇದೀಗ ಸಿನಿಮಾದಲ್ಲಿ ಗಾಯಕಿ ಮಂಗ್ಲಿ ನಟಿಸುವ ಕುರಿತು ಮಾಹಿತಿ ಸಿಕ್ಕಿದೆ. ಆದರೆ, ಅವರು ಯಾವ ಪಾತ್ರ ಮಾಡಲಿದ್ದಾರೆ? ಪಾತ್ರದ ವಿಶೇಷತೆ ಏನು ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ.

ಮಂಗ್ಲಿಗೆ ಹೊಂದಿಕೆ ಆಗುವಂತಹ ಪಾತ್ರ ಈ ಸಿನಿಮಾದಲ್ಲಿ ಏನಿರಬಹುದು ಎಂಬ ಕೌತುಕದ ಪ್ರಶ್ನೆ ಈಗ ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕೆ ಚಿತ್ರತಂಡ ಇನ್ನೂ ಉತ್ತರ ನೀಡಿಲ್ಲ. ಈ ಚಿತ್ರಕ್ಕೆ ಇನ್ನಷ್ಟೇ ಶೀರ್ಷಿಕೆ ಇಡಬೇಕಿದೆ. ನಾಜರ್, ಸಂಪತ್ ಹಾಗೂ ಸಾಧುಕೋಕಿಲ ಮುಂತಾದವರು ಕೂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ.

ರವಿಕುಮಾರ್ ಸನಾ‌ ಅವರ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್. ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಮಾಡಲಿದ್ದಾರೆ. ಜೂನ್ ಮೊದಲ ವಾರದಲ್ಲಿ ಈ ಚಿತ್ರಕ್ಕೆ ಶೂಟಿಂಗ್​ ಆರಂಭಿಸಲಾಗುವುದು. 70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ಮಾಡಲು ತೀರ್ಮಾನಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top