fbpx
ಸಮಾಚಾರ

ಜೆಡಿಎಸ್ ಮುಖಂಡ ಶರವಣ ತಾಯಿ ವಿಧಿವಶ

ಮಹಾಮಾರಿ ಕೊರೋನಾ ವೈರಸ್ ಹಾವಳಿಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಜನಸಾಮಾನ್ಯರಿಂದ ಹಿಡಿದು ಸೆಲೆಬ್ರೆಟಿ, ರಾಜಕಾರಣಿಗಳಿಗೂ ಕೊರೋನಾ ಕಾಟ ನೀಡಿದೆ. ಕೊರೋನಾದಿಂದಾಗಿ ದೇಶದಲ್ಲಿ ಲಕ್ಷಾಂತರ ಮಂದಿ ಪ್ರಾಣ ಬಿಟ್ಟಿದ್ದಾರೆ. ಅದರಲ್ಲಿ ಅನೇಕ ಖ್ಯಾತನಾಮರೂ ಇದ್ದಾರೆ.

ಈಗಾಗಲೇ ಬಹಳಷ್ಟು ರಾಜಕಾರಣಿಗಳಲ್ಲದೆ ಅವರ ಸಂಬಂಧಿಕರೂ ಕೋವಿಡ್‌-19 ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಇದೀಗ ಜೆಡಿಎಸ್‌ ಮುಖಂಡ, ವಿಧಾನಪರಿಷತ್‌ ಮಾಜಿ ಸದಸ್ಯ ಟಿ.ಎ. ಶರವಣ ಅವರ ತಾಯಿ ಸಹ ಕರೊನಾದಿಂದಾಗಿ ಮೃತಪಟ್ಟಿದ್ದಾರೆ.

ಶರವಣ ಅವರ ತಾಯಿ ಧನಲಕ್ಷ್ಮಮ್ಮ ಅವರಲ್ಲಿ ಸೋಂಕು ದೃಢಪಟ್ಟಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.

ಧನಲಕ್ಷ್ಮಮ್ಮ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಶರವಣ ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top