fbpx
ಸಮಾಚಾರ

ಗಂಡನ ಸಾವಿನ ನೋವಿನಲ್ಲಿರುವ ನಟಿ ಮಾಲಾಶ್ರೀಗೆ ತಲೆಬಾಗಿ ಕ್ಷಮೆ ಕೇಳಿದ ಹಿರಿಯ ನಟ ಜಗ್ಗೇಶ್

ಕೋಟಿ ರಾಮು ಎಂದೇ ಖ್ಯಾತಿ ಪಡೆದಿದ್ದ ನಿರ್ಮಾಪಕ ರಾಮು ಕೊರೊನಾದಿಂದ ನಿಧನರಾಗಿದ್ದರೆ ಎಂದರೆ ಇಂದಿಗೂ ಯಾರಿಂದಲೂ ನಂಬಲು ಸಾಧ್ಯವಾಗುತ್ತಿಲ್ಲ. ಪತಿಯ ಅಗಲಿಕೆಯಿಂದ ನೊಂದಿರುವ ನಟಿ ಮಾಲಾಶ್ರೀಗೆ ಸ್ಯಾಂಡಲ್‍ವುಡ್‍ನ ಅನೇಕ ಕಲಾವಿದರು ಸಾಂತ್ವನ ಹೇಳುತ್ತಿದ್ದಾರೆ. ಇದೀಗ ನವರಸ ನಾಯಕ ಜಗ್ಗೇಶ್ ಕೂಡ ಮಾಲಾಶ್ರೀಯವರಿಗೆ ಟ್ವಿಟ್ಟರ್ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದಾರೆ.

 

 

ಪತಿ ರಾಮುರನ್ನ ಕಳೆದುಕೊಂಡ ದುಃಖದಲ್ಲಿರುವ ನಟಿ ಮಾಲಾಶ್ರೀಗೆ ನವರಸ ನಾಯಕ ಜಗ್ಗೇಶ್ ಕ್ಷಮೆ ಕೇಳಿದ್ದಾರೆ. ”ನಿಮ್ಮ ಸಂಕಷ್ಟದಲ್ಲಿ ಭಾಗಿಯಾಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆಬಾಗಿ ಕ್ಷಮೆ ಕೋರುತ್ತೇನೆ” ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ನಟ ಜಗ್ಗೇಶ್ ಟ್ವೀಟ್
”ಮಾಲಾಶ್ರೀ ಮೇಡಂ.. ನಿಮ್ಮ ಸಂಕಷ್ಟದಲ್ಲಿ ಭಾಗಿ ಆಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆಬಾಗಿ ಕ್ಷಮೆ ಕೋರುವೆ. ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿ ಮಾತ್ರ ಉಳಿದಿದೆ. ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆ ಮಾಡಿ ಅನೇಕ ಚಿತ್ರರಂಗದ ಕಾರ್ಮಿಕರಿಗೆ ಅನ್ನ ನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿ ಕೋರಿ ನಿಮ್ಮ ಮನೆಯಲ್ಲೇ ರಾಮು ಹುಟ್ಟಿಬರಲಿ ಎಂದು ರಾಯರಲ್ಲಿ ಪ್ರಾರ್ಥನೆ” ಎಂದು ನಟ ಜಗ್ಗೇಶ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಂದುವರೆದು, ”ರಾಮು ಹುಟ್ಟಿಬರಲಿ ಎಂದು ರಾಯರಲ್ಲಿ ಪ್ರಾರ್ಥನೆ. ದಯಮಾಡಿ ನೀವು ಧೈರ್ಯದಿಂದ ಈ ಸಂಕಷ್ಟ ಎದುರಿಸಿ ಮಕ್ಕಳನ್ನ ರಾಮು ಎತ್ತರಕ್ಕೆ ಬೆಳಸಿ..ನಿಮ್ಮ ಜೊತೆ ನಾವು ಉಧ್ಯಮದ ಎಲ್ಲಾ ಸ್ನೇಹಿತರು ಸದಾ ಇರುತ್ತೇವೆ.. ಮುಂದಿನ ಸಾಂಸಾರಿಕ ಜೀವನ ನಿಭಾಯಿಸುವ ಶಕ್ತಿ ರಾಯರು ನಿಮಗೆ ನೀಡಲಿ ನಿಮ್ಮ ಕಲಾಬಂಧು” ಎಂದಿದ್ದಾರೆ ಜಗ್ಗೇಶ್.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top