fbpx
ಸಮಾಚಾರ

“ನನ್ನ ರಕ್ತ ಕುದಿಯುತ್ತಿದೆ” ಜೆಡಿಎಸ್ ವಿರುದ್ಧ ಸಂಸದೆ ಸುಮಲತಾ ಆಕ್ರೋಶ

“ಕೋವಿಡ್ -19 ಸಮಯದಲ್ಲಿ ಪ್ರತಿಯೊಂದಕ್ಕೂ ರಾಜಕಾರಣ ಮಾಡಿದರೆ ನನ್ನ ರಕ್ತ ಕುದಿಯುತ್ತದೆ” ಎಂದ ಸಂಸದೆ ಸುಮಲತಾ ಅಂಬರೀಷ್​ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರ ವಿರುದ್ಧ ಹರಿಹಾಯ್ದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಸುಮಲತಾ, ನನಗೆ ಮಾತನಾಡಲು ಅವಕಾಶವನ್ನೇ ನೀಡುತ್ತಿಲ್ಲ ಎಂದು ಸಭೆಯ ಅರ್ಧದಲ್ಲೇ ಎದ್ದು ಹೊರನಡೆದರು. ಅಲ್ಲದೆ ಜೆಡಿಎಸ್ ಶಾಸಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಎಷ್ಟೋ ಚುನಾವಣೆಗಳನ್ನು ಗೆದ್ದು ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಸಲಹೆ ಕೊಡುವುದನ್ನು ಬಿಟ್ಟು ಕಿರುಚಾಡಿಕೊಂಡು ಎಂಜಾಯ್ ಮಾಡುತ್ತಿದ್ದಾರೆ. ಇಲ್ಲೇನು ಡ್ರಾಮ ನಡೆಯುತ್ತಿದೆಯೇ?ಎಂದು ಸುಮಲತಾ ಪ್ರಶ್ನಿಸಿದರು. ರಾಜಕಾರಣ ಇಷ್ಟವಿಲ್ಲ, ಇಂತಹ ರಾಜಕಾರಣ ಬೇಕಿಲ್ಲ. ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸಲು ನನ್ನ ಕೈಲಾದಷ್ಟು ಮಟ್ಟಿಗೆ ಪ್ರಯತ್ನಿಸುತ್ತಿದ್ದೇನೆ. ಬೇರೆಯವರ ರೀತಿ ಸಭೆ, ಸಮಾರಂಭಗಳಿಗೆ ಹೋಗಿ ಫೋಟೋಗೆ ಫೋಸ್ ಕೊಡಲ್ಲ, ಕೆಲಸ ಮಾಡುತ್ತೇನೆ, ಕೆಲಸ ಮಾಡಲು ಮಾನವೀಯತೆ ಬೇಕು ಎಂದರು.

ರಕ್ತ ಕುದಿಯುತ್ತಿದೆ:
‘ಕೋವಿಡ್‌ ಸಂದರ್ಭದಲ್ಲಿ ಶಾಸಕರು ರಾಜಕಾರಣ ಮಾಡುತ್ತಿರುವುದಕ್ಕೆ ನನ್ನ ರಕ್ತ ಕುದಿಯುತ್ತಿದೆ. ಇದಕ್ಕಾಗಿಯೇ ಕೆಡಿಪಿ ಸಭೆಗಳಿಗೆ ಬರಲು ನನಗೆ ಇಷ್ಟವಾಗುವುದಿಲ್ಲ. ನಾನು ಆಮ್ಲಜನಕ ತರುತ್ತಿರುವುದಕ್ಕೆ ಜನರು ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಲೂ ಬಿಡದೆ ದಬ್ಬಾಳಿಕೆ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಅವರ ಪಕ್ಷದಲ್ಲಿ ಎಂ.ಪಿಗಳಿದ್ದಾರೆ, ಮಾಜಿ ಪ್ರಧಾನಿ ಇದ್ದಾರೆ. ಪ್ರಧಾನಿ ಮೋದಿ ಅವರಿಗೆ ಕರೆ ಮಾಡುವಷ್ಟು ಪ್ರಭಾವಿಗಳು ಅವರು. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಆಮ್ಲಜನಕ ತರಿಸಿಕೊಳ್ಳಬಹುದು. ಕೋವಿಡ್‌ ಸಂದರ್ಭದಲ್ಲಿ ರಾಜಕಾರಣ ಮಾಡುತ್ತಿರುವುದಕ್ಕೆ ನನಗೆ ಬೇಸರವಾಗಿದೆ’ ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top