fbpx
ಸಮಾಚಾರ

ಸ್ಯಾಂಡಲ್ ವುಡ್ ಹಿರಿಯ ನಟ ಆರ್ ಎಸ್ ರಾಜಾರಾಮ್ ನಿಧನ

ಕನ್ನಡ ಧಾರಾವಾಹಿ, ಸಿನಿಮಾ, ರಂಗಭೂಮಿಯಲ್ಲಿ ಕೆಲಸ ಮಾಡಿದ್ದ ನಟ ಆರ್‌ ಎಸ್ ರಾಜಾರಾಮ್ ಅವರು ಇಂದು (ಮೇ 10) ನಿಧನರಾಗಿದ್ದಾರೆ. ಅವರಿಗೆ 84 ವರ್ಷವಾಗಿತ್ತು. ಕೊರೊನಾದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಕೂಡ ಕುಟುಂಬಸ್ಥರು ಅಧಿಕೃತ ಮಾಹಿತಿ ನೀಡಿಲ್ಲ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಟ ಇಂದು ಕೊನೆಯುಸಿರೆಳೆದಿದ್ದಾರೆ.

ಭಾನುವಾರ ರಾಜಾರಾಮ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಸಂಜೆ ಪಾಸಿಟಿವ್ ರಿಪೋರ್ಟ್ ಕೂಡ ಬಂದಿತ್ತು. ಬೆಡ್ ಸಿಗದ ಕಾರಣ ಮನೆಯಲ್ಲಿಯೇ ಹೋಂ ಕ್ವಾರಟೈನ್ ಮಾಡಲಾಗಿತ್ತು. ಸೋಮವಾರ ಉಸಿರಾಟದ ತೊಂದರೆ ಹೆಚ್ಚಾಗಿ ಮನೆಯಲ್ಲಿ ನಿಧನರಾಗಿದ್ದಾರೆ.

1971ರಿಂದ ಇಲ್ಲಿಯವರೆಗೆ 62 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಸಿನಿರಂಗದಲ್ಲಿ ರಾಜ್‍ಕುಮಾರ್ ಸೇರಿದಂತೆ ಬಹುತೇಕ ಎಲ್ಲ ನಾಯಕರೊಂದಿಗೆ ತೆರೆ ಹಂಚಿಕೊಂಡಿದ್ದಾರೆ ರಾಜಾರಾಂ. ಶಾಲಾ ದಿನಗಳಿಂದಲೇ ರಂಗಭೂಮಿಯಲ್ಲಿ ಆಸಕ್ತಿ ತೋರಿದ ರಾಜಾರಾಂ ನಂತರದಲ್ಲಿ ಸಿನಿಮಾಗಳಿಗೆ ಬಂದು ಹೆಸರು ಸಹ ಮಾಡಿದರು.

1971ರಲ್ಲಿ ಕೃಷ್ಣಸ್ವಾಮಿ ನಿರ್ದೇಶಕ ಪಾಪಪುಣ್ಯ ಸಿನಿಮಾ ರಾಜಾರಾಂ ಅವರ ಅಭಿನಯದ ಮೊದಲ ಸಿನಿಮಾ. ಸರೋಜಾ ದೇವಿ, ಕಲ್ಯಾಣ್ ಕುಮಾರ್ ಅಶ್ವತ್ಥ್ ಪ್ರಮುಖ ಪಾತ್ರದಲ್ಲಿದ್ದರು. ವಿಧಾನಸೌಧದಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡಿಕೊಂಡೇ ಸಿನಿಮಾ ಹಾಗೂ ರಂಗಭೂಮಿಯಲ್ಲಿ ಸಕ್ರಿಯವಾಗಿದ್ದರು ರಾಜಾರಾಂ. ನಟ ಲೋಕೇಶ್ ಅವರೊಂದಿಗೆ ಬಹಳ ಹಳೆಯ ಗೆಳೆತನವಿತ್ತು. ರಂಗಭೂಮಿಯಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top