fbpx
ಸಮಾಚಾರ

ಲಾಕ್‌ಡೌನ್ ಸಂಕಷ್ಟ: 3 ಸಾವಿರ ಕಾರ್ಮಿಕ ಕುಟುಂಬಕ್ಕೆ ಉಪೇಂದ್ರ ಸಹಾಯಹಸ್ತ

ಮಹಾಮಾರಿ ಕೊರೊನಾ ವೈರಸ್ ನಿಂದ ಇಡೀ ದೇಶ ತತ್ತರಿಸಿ ಹೋಗಿದೆ. ಜನ ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇತ್ತ ಲಾಕ್ ಡೌನ್ ಪರಿಣಾಮ ಚಿತ್ರೀಕರಣ ಕೂಡ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಚಿತ್ರರಂಗದ ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ನಟ ಉಪೇಂದ್ರ ಮುಂದಾಗಿದ್ದಾರೆ.

 

 

ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ “ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸಿ. ನಿಮ್ಮ ಉಪ್ಪಿ” ಎಂದಿದ್ದಾರೆ.

ಹೀಗಿರುವಾಗಲೇ, ಸಂಕಷ್ಟದಲ್ಲಿರುವ ಜನರಿಗೆ ಕನ್ನಡದ ಹಲವು ಸೆಲೆಬ್ರಿಟಿಗಳು ತಮ್ಮದೇ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಸುದೀಪ್​ ತಮ್ಮ ಕಿಚ್ಚ ಚಾರಿಟಬಲ್​ ಟ್ರಸ್ಟ್​ನಿಂದ 30 ಆಕ್ಸಿಜನ್​ ಸಿಲಿಂಡರ್​ಗಳನ್ನು ಕೊಟ್ಟಿದ್ದಾರೆ. ಶ್ರೀಮುರಳಿ ಭಾನುವಾರ ಐದು ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿಗೆ ಊಟ ವಿತರಿಸಿದ್ದಾರೆ. ರಾಗಿಣಿ, ಸಂಜನಾ ಸೇರಿದಂತೆ ಹಲವರು ತಮ್ಮದೇ ರೀತಿಯಲ್ಲಿ ಸಹಾಯ ಮಾಡುತ್ತಲೇ ಇದ್ದಾರೆ. ಇದೀಗ ಉಪೇಂದ್ರ ಕೂಡ ಬಡ ಕಾರ್ಮಿಕರ ನೆರವಿಗೆ ಧಾವಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top