fbpx
ಸಮಾಚಾರ

ಲಸಿಕೆ ಖರೀದಿಗೆ ರಾಜ್ಯ ಕಾಂಗ್ರೆಸ್ಸಿನಿಂದ 100 ಕೋಟಿ ಕೊಡಲು ನಿರ್ಧಾರ

ಪಕ್ಷದ ಶಾಸಕರು ಮತ್ತು ಸಂಸದರ‌ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ ₹ 1 ಕೋಟಿ ಸೇರಿದಂತೆ ₹ 100 ಕೋಟಿಯನ್ನು ಕೋವಿಡ್ ಲಸಿಕೆ ಖರೀದಿಗಾಗಿ ಸರ್ಕಾರಕ್ಕೆ ಒಪ್ಪಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ವಿಷಯ ಪ್ರಕಟಿಸಿದರು.

 

 

ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ನಿರ್ವಹಣೆಯಲ್ಲಿ, ವ್ಯಾಕ್ಸಿನ್ ವಿತರಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ, ಶಾಸಕಾಂಗ ಪಕ್ಷದ ಶಾಸಕರು ತೀರ್ಮಾನ ಮಾಡಿದ್ದೇವೆ. 95 ಎಂಎಲ್ ಎ, ಎಂಎಲ್ ಸಿ ಗಳು ಇದ್ದಾರೆ. ಒಬ್ಬ ಎಂಪಿ, ನಾಲ್ವರು ರಾಜ್ಯಸಭಾ ಸದಸ್ಯರು ಇದ್ದಾರೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ ಒಂದು ಕೋಟಿಯನ್ನ ವ್ಯಾಕ್ಸಿನ್ ಖರೀದಿಗೆ ಕೊಡುತ್ತೇವೆ. ಒಟ್ಟಾರೆ ಕಾಂಗ್ರೆಸ್ ನಿಂದ ನಮ್ಮ ಅನುದಾನದಲ್ಲಿ 110 ಕೋಟಿ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.

ರಾಜ್ಯ ಸರ್ಕಾರ ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕರೆದಿದೆ. ಅದರ ಬಗ್ಗೆ ಅನುಮಾನಗಳಿವೆ. ಈಗ‌ ಕಾಂಗ್ರೆಸ್ ಪಕ್ಷ ನೀಡುತ್ತಿರುವ‌ ಮೊತ್ತವನ್ನು ಪಾರದರ್ಶಕ ರೀತಿಯಲ್ಲಿ ಬಳಸಬೇಕು ಎಂದು ಸಿದ್ದರಾಮಯ್ಯ ಹೇಳಿದರು. ದೇಶದ ಜನರು ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಎಲ್ಲಿದ್ದಾರೋ ಗೊತ್ತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಜನರ ನೆರವಿಗೆ ಬರುತ್ತಿಲ್ಲ ಎಂದು ಟೀಕಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top