fbpx
ಸಮಾಚಾರ

ಗ್ರಾಮೀಣ ಬ್ಯಾಂಕುಗಳ ನೇಮಕಾತಿ: 10,447 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2021ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ದೇಶಾದ್ಯಂತ ಕನ್ನಡ ಸೇರಿ ಸುಮಾರು 43 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿಯಿರುವ ಆಫೀಸರ್ ಮತ್ತು ಆಫೀಸರ್ ಅಸಿಸ್ಟೆಂಟ್ ವಿಭಾಗದಲ್ಲಿ ಬರೋಬ್ಬರೀ 10,447 ವಿವಿಧ ಹುದ್ದೆಗಳನ್ನ ಭರ್ತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ, ಎಂಬಿಎ, ಸಿಎ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ:
ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ, ಒಬಿಸಿ ಅಭ್ಯರ್ಥಿಗೆ 3 ವರ್ಷ, ಎಸ್ ಸಿ/ ಎಸ್ಟಿ ಅಭ್ಯರ್ಥಿ 5 ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷ ತನಕ ವಯೋಮಿತಿಯಲ್ಲಿ ವಿನಾಯಿತಿ ಇರಲಿದೆ.

ಅರ್ಜಿ ಶುಲ್ಕ :
ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು ರೂ. 175, ಉಳಿದ ಅಭ್ಯರ್ಥಿಗಳು ರೂ. 850 ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ :
ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಿಂಗಲ್ ಲೆವೆಲ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 08, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 28, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 28, 2021

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ಕೊಡಬಹುದು.

ನೇಮಕಾತಿಗೆ ಸಂಭಂದಿಸಿದ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top