fbpx
ಸಮಾಚಾರ

ರಶ್ಮಿಕಾರನ್ನು ನೋಡಲು ತೆಲಂಗಾಣದಿಂದ ಬಂದು ಪೇಚಿಗೆ ಸಿಲುಕಿದ ಅಭಿಮಾನಿ ಪೋಲೀಸರ ವಶ

ನಟಿ ರಶ್ಮಿಕಾ ಮಂದಣ್ಣರನ್ನು ನೋಡಲು ಅಭಿಮಾನಿಯೊಬ್ಬ ತೆಲಂಗಾಣದಿಂದ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಗ್ಗುಲ ಗ್ರಾಮಕ್ಕೆ ಹುಡುಕಿಕೊಂಡು ಬಂದಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಅಭಿಮಾನಿಯನ್ನು ಆಕಾಶ್ ತ್ರಿಪಾಠಿ ಎಂದು ಗುರುತಿಸಲಾಗಿದೆ.

ಮೈಸೂರಿನವರೆಗೆ ರೈಲಿನಲ್ಲಿ ಬಂದಿರುವ ಆಕಾಶ್, ಬಳಿಕ ವಿರಾಜಪೇಟೆಗೆ ತರಕಾರಿ ತೆಗೆದುಕೊಂಡು ಹೋಗುವ ಗೂಡ್ಸ್ ಆಟೋದಲ್ಲಿ ವಿರಾಜಪೇಟೆ ತಲುಪಿದ್ದಾನೆ. ಅಲ್ಲಿಂದ ವಿರಾಜಪೇಟೆ ನಗರದಿಂದ ಗೂಗಲ್ ಮ್ಯಾಪ್ ಹಾಕಿಕೊಂಡು ಮಗ್ಗುಲ ಗ್ರಾಮದಲ್ಲಿ ಮಂದಣ್ಣ ಎಂಬವರಿಗೆ ಸೇರಿದ ಜಾಗ ಇದ್ದು, ಇಲ್ಲೇ ರಶ್ಮಿಕಾ ಮಂದಣ್ಣ ಮನೆ ಇರಬೇಕು ಅಂದುಕೊಂಡು ಆಟೋದಲ್ಲಿ ಗ್ರಾಮಕ್ಕೆ ಬಂದಿಳಿದಿದ್ದಾನೆ. ನಂತರ ಅಕ್ಕಪಕ್ಕದ ಜನರ ಬಳಿ ರಶ್ಮಿಕಾ ಮಂದಣ್ಣ ಮನೆ ಎಲ್ಲಿ ಎಂದು ವಿಚಾರಿಸಿ ಹುಡುಕಾಟ ನಡೆಸಿದ್ದಾನೆ.

ಸದ್ಯ ಆಕಾಶ್‌ಗೆ ಬುದ್ಧಿವಾದ ಹೇಳಿ ಪೊಲೀಸರು ಆತನನ್ನು ವಾಪಸ್ ತೆಲಂಗಾಣಕ್ಕೆ ಹೋಗುವಂತೆ ತಿಳಿಸಿದ್ದಾರೆ. ಅದರಂತೆಯೇ ಆಕಾಶ್ ಕೂಡ ತೆಲಂಗಾಣಕ್ಕೆ ಮರಳಿದ್ದಾನೆ. ಬಂದ ದಾರಿಗೆ ಸುಂಕವಿಲ್ಲದೆ ಅಭಿಮಾನಿ ತನ್ನ ಊರಿಗೆ ವಾಪಸ್​​ ಆಗಿದ್ದಾನೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top