fbpx
ಸಮಾಚಾರ

ಈಜುಕೊಳ ವಿವಾದಕ್ಕೆ ಹೊಸ ‘ರೂಪ’: ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಗುಡುಗು

ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಜಿಲ್ಲಾಧಿಕಾರಿ ನಿವಾಸದ ಆವರಣದಲ್ಲಿ ನಿರ್ಮಿಸಿದ್ದ ಈಜುಕೊಳ ಭಾರೀ ವಿವಾದ ಸೃಷ್ಟಿಸಿತ್ತು. ನಿಯಮ ಉಲ್ಲಂಘನೆ ಮಾಡಿ ಅನುಮತಿ ಪಡೆಯದೇ ರೋಹಿಣಿ ಸಿಂಧೂರಿಯವರು ಸ್ವಹಿತಾಸಕ್ತಿಯಿಂದ ಈಜುಕೊಳ ನಿರ್ಮಿಸಿಕೊಂಡಿದ್ದರು ಎಂದು ಮೈಸೂರು ಪ್ರಾದೇಶಿಕ ಆಯುಕ್ತ ಜಿಸಿ ಪ್ರಕಾಶ್ ಸಲ್ಲಿಸಿದ್ದ ವರದಿಯಲ್ಲಿ ಹೇಳಲಾಗಿದೆ.

 

 

ಇದೀಗ ಅವರು ಅಲ್ಲಿ ಜಿಲ್ಲಾಧಿಕಾರಿಯಾಗಿಲ್ಲ. ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಆದರೆ ಈಜುಕೊಳದ ಬಗ್ಗೆ ಮಾತನಾಡುವುದು ಮಾತ್ರ ನಿಂತಿಲ್ಲ. ಕರ್ನಾಟಕದ ಐಜಿಪಿ, ಮಹಿಳಾ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ರೂಪಾ, “ಕೋರೋನ ಹಾಗು ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ ಸಾರ್ವಜನಿಕ ಹಣವ ಬಂಗಲೆಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಲು ಮುಂದಾಗಿದ್ದು ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನ ಎದ್ದು ತೋರಿಸುತ್ತದೆ. ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ.ಕಟ್ಟುವುದನ್ನು ಮುಂದೂಡಲೂಬಹುದಿತ್ತು ಎಂದು ಟ್ವೀಟ್ ಮಾಡಿ ರೋಹಿಣಿ ಅವರಿಗೆ ಠಕ್ಕರ್ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top