fbpx
ಸಮಾಚಾರ

ಬೆಸ್ಕಾಂನಲ್ಲಿ ಉದ್ಯೋಗಾವಕಾಶ: ಜುಲೈ 5ರೊಳಗೆ ಅರ್ಜಿ ಹಾಕಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಆಫ್‌ ಲೈನ್ ಮೂಲಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಜುಲೈ 5ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. Company secretary ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ: ಕಂಪೆನಿ ಸೆಕ್ರೆಟರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 61,420 ರಿಂದ 1,03,290ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ತಲುಪಿಸಬೇಕು. ಜುಲೈ 5,2021ರೊಳಗೆ ಅರ್ಜಿಯನ್ನು ತಲುಪಬೇಕು.

ಕಚೇರಿ ವಿಳಾಸ: ಜನರಲ್ ಮ್ಯಾನೇಜರ್, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕೆಆರ್ ಸರ್ಕಲ್ ಕಚೇರಿ, ಬೆಂಗಳೂರು-560 001.

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ವೆಬ್‌ಸೈಟ್‌ https://bescom.karnataka.gov.in ಗೆ ಭೇಟಿ ನೀಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top