fbpx
ಸಮಾಚಾರ

ಟಿ20 ವಿಶ್ವಕಪ್ ವೇಳಾಪಟ್ಟಿ ಖಚಿತಪಡಿಸಿದ ಐಸಿಸಿ

ಟ್ವೆಂಟಿ ಟ್ವೆಂಟಿ ವಿಶ್ವಕಪ್ ಆರಂಭವಾಗುವ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಅಧಿಕೃತ ಮಾಹಿತಿ ನೀಡಿದೆ. ಅಕ್ಟೋಬರ್ 17 ರಿಂದ ಐಸಿಸಿ ಟಿ-ಟ್ವೆಂಟಿ ವಿಶ್ವಕಪ್ ಆರಂಭವಾಗಲಿದೆ ಎಂದು ಐಸಿಸಿ ಹೇಳಿದೆ. ನವೆಂಬರ್ 14 ರಂದು ಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಯುಎಇ, ಒಮನ್​ನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಪಂದ್ಯ ನಡೆಯಲಿದೆ ಎಂದು ಐಸಿಸಿ ಹೇಳಿದೆ. ಅದರಂತೆ, ಭಾರತದಿಂದ ಯುಎಇಗೆ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿ ಸ್ಥಳಾಂತರ ಆಗಿರುವ ಬಗ್ಗೆ ಮಾಹಿತಿ ಖಚಿತಪಡಿಸಿದೆ.

ಭಾರತದಲ್ಲಿ ನಡೆಸಲು ಉದ್ದೇಶಿಸಿದ್ದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಕೋವಿಡ್‌–19 ಕಾರಣಗಳಿಂದಾಗಿ ಯುಎಇ ಮತ್ತು ಒಮಾನ್‌ಗೆ ಸ್ಥಳಾಂತರಿಸಲಾಗಿದೆ. ‘ಟೂರ್ನಿಯನ್ನು ಭಾರತದಿಂದ ಸ್ಥಳಾಂತರಿಸಬಹುದು’ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಸೋಮವಾರ ಐಸಿಸಿಗೆ ತಿಳಿಸಿತ್ತು.

‘ಬಿಸಿಸಿಐ ಟೂರ್ನಿಯ ಆಯೋಜನೆ ಮುಂದುವರಿಸಲಿದ್ದು, ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ, ಅಬುಧಾಬಿಯ ಶೇಖ್‌ ಝಯೆದ್ ಕ್ರೀಡಾಂಗಣ, ಶಾರ್ಜಾ ಕ್ರೀಡಾಂಗಣ ಹಾಗೂ ಒಮಾನ್‌ ಕ್ರಿಕೆಟ್‌ ಅಕಾಡೆಮಿ ಮೈದಾನದಲ್ಲಿ 2021ರ ಅಕ್ಟೋಬರ್‌ 17ರಿಂದ ನವೆಂಬರ್‌ 14ರ ವರೆಗೂ ಟಿ20 ವಿಶ್ವಕಪ್‌ ಕ್ರಿಕೆಟ್‌ ನಡೆಯಲಿದೆ’ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಹತೆಗಾಗಿ ಎಂಟು ತಂಡಗಳು ಟೂರ್ನಿಯ ಮೊದಲ ಸುತ್ತಿನಲ್ಲಿ ಸೆಣಸಲಿವೆ. ಒಮಾನ್‌ ಮತ್ತು ಯುಎಇ ಎರಡೂ ಕಡೆ ಆರಂಭಿಕ ಸುತ್ತಿನ ಪಂದ್ಯಗಳು ನಡೆಯಲಿವೆ. ಎಂಟು ತಂಡಗಳ ಪೈಕಿ ನಾಲ್ಕು ತಂಡಗಳು ‘ಸೂಪರ್‌ 12’ ಸುತ್ತಿಗೆ ಅರ್ಹತೆ ಪಡೆಯುತ್ತವೆ, ಆ ತಂಡಗಳು ಈಗಾಗಲೇ ಅರ್ಹತೆ ಗಳಿಸಿರುವ 8 ತಂಡಗಳೊಂದಿಗೆ ಸೇರಲಿವೆ. ನವೆಂಬರ್‌ 14ರಂದು ಟೂರ್ನಿಯ ಫೈನಲ್‌ ಪಂದ್ಯ ನಡೆಯಲಿದೆ.

ಈ ಬಾರಿ ಟಿ20 ವಿಶ್ವಕಪ್​ನಲ್ಲಿ 16 ತಂಡಗಳು ಪಾಲ್ಗೊಳ್ಳಲಿವೆ. ಟಿ20 ಕ್ರಿಕೆಟ್​ನಲ್ಲಿ ಅಗ್ರ ಶ್ರೇಯಾಂಕ ಹೊಂದಿರುವ ಎಂಟು ದೇಶಗಳು ನೇರವಾಗಿ ಸೂಪರ್ 12 ಹಂತ ಪ್ರವೇಶ ಪಡೆಯಲಿವೆ. ಅಂದರೆ, ಭಾರತ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಫ್ಘನಿಸ್ತಾನ ತಂಡಗಳು ನೇರವಾಗಿ ಸೂಪರ್ 12 ಹಂತದಿಂದ ಟಿ20 ಅಭಿಯಾನ ಆರಂಭಿಸುತ್ತವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top