fbpx
ಸಮಾಚಾರ

ಕೊನೆಗೂ ಅಂತ್ಯವಾಯ್ತು ‘ಕಿರಿಕ್ ಪಾರ್ಟಿ’ ಹಾಡಿನ ವಿವಾದ..?; ರಕ್ಷಿತ್ ಶೆಟ್ಟಿ ಹೇಳಿದ್ದೇನು?

ಈ ಹಿಂದೆ ಕೆಲ ದಿನಗಳ ಕಾಲ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಕಿರಿಕ್ ಪಾರ್ಟಿ ಚಿತ್ರದ ಹಾಡಿನ ಕಾಪಿರೈಟ್ (ಕೃತಿಸ್ವಾಮ್ಯ) ಉಲ್ಲಂಘನೆ ವಿವಾದ ಕೊನೆಗೂ ಅಂತ್ಯವಾಗಿದ್ದು, ಲಹರಿ ಸಂಸ್ಥೆ ಜೊತೆ ಪರಸ್ಪರ ಮಾತುಕತೆ ಮೂಲಕ ವಿವಾದ ಇತ್ಯರ್ಥ ಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಕಿರಿಕ್ ಪಾರ್ಟಿ ಚಿತ್ರದ ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಲಹರಿ ಸಂಸ್ಥೆ ಹಾಗೂ ನಟ ರಕ್ಷಿತ್‌ ಶೆಟ್ಟಿ ಅವರ ನಡುವಿನ ‘ಕಾಪಿರೈಟ್‌’ ವಿವಾದ ಮಾತುಕತೆ ಮೂಲಕವೇ ಬಗೆಹರಿದಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಲಹರಿ ವೇಲು ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ಜೊತೆಗಿರುವ ಸೆಲ್ಫಿಯೊಂದನ್ನು ರಕ್ಷಿತ್‌ ಶೆಟ್ಟಿ ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

 

 

ಒಂದು ಘಟನೆ, ಹಲವು ದೃಷ್ಟಿಕೋನಗಳು. ದೃಷ್ಟಿಕೋನಗಳನ್ನು ಹಂಚಿಕೊಂಡು, ಅರ್ಥ ಮಾಡಿಕೊಂಡಾಗ ನಾವು ಮನುಷ್ಯರಾಗಿ ಒಗ್ಗೂಡುತ್ತೇವೆ. ಪ್ರೀತಿ ಮತ್ತು ಪರಸ್ಪರ ಗೌರವಗಳಲ್ಲಿ ಎಲ್ಲವೂ ಸೇರಿಕೊಳ್ಳಲೇಬೇಕು. ಅದೇ ಬೆಳವಣಿಗೆಯ ನಿಜವಾದ ಲಕ್ಷಣ ಎಂದು ರಕ್ಷಿತ್ ಶೆಟ್ಟಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ.

ಫೋಟೋ ನೋಡಿದ ಅನೇಕರು ಈ ಮೂವರಿಗೂ ಶುಭ ಹಾರೈಸಿದ್ದಾರೆ. ನೆಟ್ಟಿಗರು ಹಲವು ಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ತಮ್ಮ ನಡುವಿನ ಕಿರಿಕ್ ಮರೆತು ಒಂದಾಗಿರುವ ಈ ಸೆಲೆಬ್ರಿಟಿಗಳನ್ನು ಕಂಡು ಸ್ಯಾಂಡಲ್‍ವುಡ್ ಮಂದಿ ಖುಷಿಪಟ್ಟಿದ್ದಾರೆ.

ದಕ್ಷಿಣ ಭಾರತದಲ್ಲಿನ ಪ್ರಮುಖ ಆಡಿಯೋ ಸಂಸ್ಥೆಗಳಲ್ಲಿ ಲಹರಿ ಮ್ಯೂಸಿಕ್​ ಕೂಡ ಪ್ರಮುಖವಾದದ್ದು. ಸಾವಿರಾರು ಸೂಪರ್​ ಹಿಟ್​ ಹಾಡುಗಳು ಈ ಸಂಸ್ಥೆಯಿಂದ ಹೊರಬಂದಿವೆ. ಅದೇ ರೀತಿ ರಕ್ಷಿತ್​ ಶೆಟ್ಟಿ ಕೂಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಆದರೆ ಸಣ್ಣ ಕಿರಿಕ್​ನಿಂದ ಇಬ್ಬರೂ ಕೋರ್ಟ್​ ಮೆಟ್ಟಿಲು ಹತ್ತುವಂತಾಗಿದ್ದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು. ಈಗ ಇಬ್ಬರ ನಡುವಿನ ವಿವಾದ ಬಗೆಹರಿದಿದ್ದು, ಸುಖಾಂತ್ಯ ಕಂಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top