fbpx
ಸಮಾಚಾರ

ಚೊಚ್ಚಲ ಮಗುವಿಗೆ ಜನ್ಮ ನೀಡಿದ ‘ಬಿಗ್ ಬಾಸ್’ ಚೆಲುವೆ ನಯನ ಪುಟ್ಟಸ್ವಾಮಿ

ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ಅವರ ಮನೆಗೆ ಹೊಸ ಅತಿಥಿ ಆಗಮನವಾಗಿದ್ದು, ನಯನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಪತಿಯೊಂದಿಗೆ ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ನೆಲೆಸಿರುವ ನಯನ ಪುಟ್ಟಸ್ವಾಮಿ, ಟೆಂಪಲ್ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

ಈ ಖುಷಿಯ ವಿಚಾರವನ್ನು ನಟಿ ನಯನ ಪುಟ್ಟಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಮಗುವಿನ ಹಸ್ತದ ಫೋಟೋವನ್ನು ಶೇರ್ ಮಾಡಿ ”ಗಂಡು ಮಗು” ಎಂದು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

 

 

ನಯನಾ ಪುಟ್ಟಸ್ವಾಮಿ ಬಿಗ್ ಬಾಸ್ 6 ಹಾಗೂ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 1ರ ಮೂಲಕ ಸಹ ಜನಪ್ರಿಯರಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದು, ಸಿರಿಯಲ್‍ಗಳಲ್ಲಿ ಸಹ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತಮ್ಮ ಪತಿ ಚರಣ್ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವುದಿರಿಂದ ಅಲ್ಲಿಗೇ ಶಿಫ್ಟ್ ಆಗಿದ್ದಾರೆ.

ಇತ್ತೀಚೆಗೆ ಅವರು ಪ್ರಗ್ನೆನ್ಸಿ ವಿಚಾರವನ್ನು ಸಹ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದೀಗ ಗಂಡು ಮಗು ಜನನವಾಗಿರುವ ಕುರಿತು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಂತಸದ ವಿಚಾರ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top