fbpx
ಸಮಾಚಾರ

ಶಾಕಿಂಗ್ ನ್ಯೂಸ್ :ಇಂಗ್ಲೆಂಡ್‌ ಕ್ರಿಕೆಟ್ ತಂಡದ 7 ಮಂದಿಗೆ ಕೋವಿಡ್ ಪಾಸಿಟಿವ್

ಇಂಗ್ಲೆಂಡ್ ಕ್ರಿಕೆಟ್ ತಂಡದ ಏಳು ಸದಸ್ಯರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ವಿಷಯವನ್ನು ತಿಳಿಸಿದೆ. ಆದಾಗ್ಯೂ, ಪಾಕಿಸ್ತಾನ ವಿರುದ್ಧದ ಏಕದಿನ ಕ್ರಿಕೆಟ್ ಹಾಗೂ ಟಿ-20 ಸರಣಿಗಳು ನಿಗದಿಯಂತೆ ನಡೆಯಲಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಸ್ಪಷ್ಪಪಡಿಸಿದೆ.

ತಂಡವು ಬ್ರಿಸ್ಟಲ್‌ನಲ್ಲಿ ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯ ಆಡಿತ್ತು. ಅದಾದ ಮರುದಿನ ನಡೆಸಿದ ಪರೀಕ್ಷೆಯಲ್ಲಿ ತಂಡದ ಮೂವರು ಆಟಗಾರರು ಮತ್ತು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಡೀ ತಂಡದ ಸದಸ್ಯರು ಭಾನುವಾರದಿಂದಲೇ ಪ‍್ರತ್ಯೇಕ ವಾಸದಲ್ಲಿ ಇದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತಿಳಿಸಿದೆ.

ಇಂಗ್ಲೆಂಡ್ ಕ್ರಿಕೆಟ್ ತಂಡವು ತವರಿನಲ್ಲಿ ಪಾಕಿಸ್ತಾನ ವಿರುದ್ದ 6 ಪಂದ್ಯಗಳ ಸೀಮಿತ ಓವರ್‌ಗಳ ಸರಣಿಯನ್ನು ಆಡಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 08ರಿಂದ ಆರಂಭವಾಗಲಿದೆ. ಇನ್ನು 3 ಪಂದ್ಯಗಳ ಟಿ20 ಸರಣಿ ಜುಲೈ 16ರಿಂದ ಆರಂಭವಾಗಲಿದೆ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಹೊಸ ತಂಡವನ್ನು ಪ್ರಕಟಿಸುವ ಸಾಧ್ಯೆತೆಯಿದೆ ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top