fbpx
ಸಮಾಚಾರ

“ನಮ್ಮಮ್ಮ ಕೊನೆ ಕ್ಷಣಗಳನ್ನು ಕಳೆಯುತ್ತಿದ್ದಾರೆ, ಅವರು ಉಳಿಯೋದು ಕಷ್ಟ” ದುನಿಯಾ ವಿಜಯ್

ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಅವರ ಆರೋಗ್ಯ ಗಂಭೀರವಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ದುನಿಯಾ ವಿಜಯ್ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕೊವಿಡ್ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿದೆ. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

“ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ಪ್ರತಿದಿನ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಅವರು ಕೊನೆ ಕ್ಷಣಗಳನ್ನ ಕಳೆಯುತ್ತಿದ್ದಾರೆ. ಆದರೂ ಮತ್ತೆ ಅವರ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ” ಎಂದು ದುನಿಯಾ ವಿಜಯ್ ಹೇಳಿದ್ದಾರೆ.

ಕೊರೊನಾ ಗೆದ್ದಿದ್ದ ದುನಿಯಾ ವಿಜಯ್ ತಂದೆ-ತಾಯಿ
ಕಳೆದ ಎರಡು ತಿಂಗಳ ಹಿಂದೆಯಷ್ಟೇ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಅವರಿಗೆ ಕೋವಿಡ್ 19 ಪಾಸಿಟಿವ್ ಕಂಡುಬಂದಿತ್ತು. ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿ, ತಂದೆ-ತಾಯಿಯನ್ನು ದುನಿಯಾ ವಿಜಯ್ ಆರೈಕೆ ಮಾಡಿದ್ದರು. ಮಾರಣಾಂತಿಕ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ನಾರಾಯಣಮ್ಮ ಅವರಿಗೆ ಇದೀಗ ಬ್ರೇನ್ ಸ್ಟ್ರೋಕ್ ಆಗಿದೆ. ಆಸ್ಪತ್ರೆಗೆ ಸೇರಲು ನಾರಾಯಣಮ್ಮ ಅವರಿಗೆ ಇಷ್ಟವಿಲ್ಲದ ಕಾರಣ ದುನಿಯಾ ವಿಜಯ್ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ ದುನಿಯಾ ವಿಜಯ್.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top